ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 21ರ ಒಳಗಾಗಿ ಎಲ್ಲಾ ಡಿಗ್ರಿ ಮತ್ತು ವಿಶ್ವವಿದ್ಯಾಲಯಗಳ ಕ್ಯಾಂಪಸ್ ಗಳಲ್ಲಿ ಸಿಸಿಟಿವಿ ಅಳವಡಿಸಬೇಕೆಂದು ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.
ಹೌದು, ಇತ್ತೀಚಿಗೆ ಡಿಗ್ರಿ ಹಾಗೂ ವಿಶ್ವವಿದ್ಯಾಲಯ ಕಾಲೇಜುಗಳಲ್ಲಿ ರ್ಯಾಗಿಂಗ್, ಡ್ರಗ್ಸ್ ಚಟುವಟಿಕೆ ಹಾಗೂ ಲೈಂಗಿಕ ಕಿರುಕುಳ ಸೇರಿದಂತೆ ಇನ್ನೂ ಹಲವಾರು ರೀತಿಯ ಚಟುವಟಿಕೆಗಳು ನಡೆಯುತ್ತವೆ ಅಗಳನ್ನು ತಡೆಗಟ್ಟಬೇಕೆನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಎಲ್ಲಾ ಡಿಗ್ರಿ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಸಿಸಿಟಿವಿ ಅಳವಡಿಸಬೇಕೆಂದು ಆದೇಶ ಹೊರಡಿಸಿದೆ. ಇದನ್ನೂ ಓದಿ: ಡಿಕೆ ಶಿವಕುಮಾರ್ ಜತೆ ಬಹಿರಂಗ ಚರ್ಚೆಗೆ ನಾನು ಸಿದ್ಧ: ತೇಜಸ್ವಿ ಸೂರ್ಯ
ಇನ್ನು ಜುಲೈ 21ರ ಒಳಗೆ ಸಿಸಿಟಿವಿ ಅಳವಡಿಕೆ ಕುರಿತು ಸಂಬಂಧಿತ ಕಾಲೇಜುಗಳು ವಿಭಾಗಕ್ಕೆ ಮಾಹಿತಿ ಸಲ್ಲಿಸಬೇಕಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ವಿಶೇಷ ಸೂಚನೆ ನೀಡಲಾಗಿದ್ದು, ಅನುದಾನದಲ್ಲಿಯೇ ಸಿಸಿಟಿವಿ ಅಳವಡಿಸಬೇಕು ಎಂಬ ನಿಬಂಧನೆಯು ಇದೆ.
