ಬೆಂಗಳೂರು: ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಮೋದಿ ಸರ್ಕಾರ ಮೊದಲಿಗೆ ಟೀಕೆ ಮಾಡಿತ್ತು ಆದರೆ ಈಗ ಅವರೇ ನಮ್ಮ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳಲ್ಲಿ ಘೋಷಿಸಿಕೊಳ್ಳುತ್ತಿದ್ದಾರೆ ನಾವು ಇದರ ಬಗ್ಗೆ ಟೀಕೆ ಮಾಡುವುದಿಲ್ಲ ಎಂದು ಸಚಿವ ಚೆಲುವರಾಯಸ್ವಾಮಿ ವ್ಯಂಗ್ಯವಾಡಿದ್ದಾರೆ.
ಈ ಕುರಿತು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಹಾರದಲ್ಲಿ ಗ್ಯಾರಂಟಿ ಯೋಜನೆ ಘೋಷಣೆ ವಿಚಾರವಾಗಿ ನಾವೇನು ಟೀಕೆ ಮಾಡಲ್ಲ. ಮೊದಲು ಗ್ಯಾರೆಂಟಿ ಯೋಜನೆಗಳನ್ನು ದೆಹಲಿಯಲ್ಲಿ ಕೊಟ್ಟರು ಮತ್ತೆ ಇದೀಗ ಬಿಹಾರದಲ್ಲಿ ಕೊಟ್ಟಿದ್ದಾರೆ. ಬಿಜೆಪಿ ಹೇಳಿದಂತೆ ನಡೆಯುವುದಿಲ್ಲ ಎಂದಿದ್ದಾರೆ. ಕರ್ನಾಟಕ ಗ್ಯಾರಂಟಿ ವಿಚಾರದಲ್ಲಿ ದೇಶಕ್ಕೆ ಮಾದರಿಯಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸಿದ್ದಿ
ಆರ್ಥಿಕ ದಿವಾಳಿ ಆಗುತ್ತೆ ಎಂದು ಪಿಎಂ ಮೋದಿ ಟೀಕೆ ಮಾಡಿದ್ದರು. ಆದರೆ 2 ವರ್ಷ ಯಾವ ರೀತಿ ಬಜೆಟ್ ಕೊಟ್ಟಿದ್ದಾರೆ ಸಿದ್ದರಾಮಯ್ಯ ಎಂಬುದು ಗೊತ್ತಿದೆ. ಆರ್ಥಿಕ ಶಿಸ್ತು ಕಾಪಾಡಲಾಗಿದೆ. ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಆಗ್ತಿದೆ. ಈಗ ಬಿಜೆಪಿಗೆ ಜ್ಞಾನೋದಯವಾಗಿದೆ. ಬಿಜೆಪಿಗರು ಕೊಡಲಿ ನಾವೇನು ಟೀಕೆ ಮಾಡಲ್ಲ. ನಾವು ಈ ಬಗ್ಗೆ ಕಾಮೆಂಟ್ ಮಾಡಲ್ಲ ಎಂದಿದ್ದಾರೆ.
