ಬೆಂಗಳೂರು: ಇತ್ತೀಚೆಗೆ ನಿಧನರಾದ ಹಿರಿಯ ನಟಿ ಬಹುಭಾಷಾ ತಾರೆ ಬಿ.ಸರೋಜಾದೇವಿ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪನಮನ ಸಲ್ಲಿಸಿ ಅಂತಿಮ ದರ್ಶನ ಪಡೆದ ವಿಚಾರವು ‘ಮೆಟಾ’ದಲ್ಲಿ ಇಂಗ್ಲಿಷ್ನಿಂದ ಕನ್ನಡಕ್ಕೆ ಆದ ಸ್ವಯಂ ಅನುವಾದ ಬಹಳ ಕೆಟ್ಟದಾಗಿ ಆಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದರು. ಅನುವಾದದ ಸಮಸ್ಯೆಯನ್ನು ಸರಿಪಡಿಸಿರುವುದಾಗಿ ಮೆಟಾ ತಿಳಿಸಿದ್ದರು.
ಅಲ್ಲದೆ ಸಿಎಂ ಸಿದ್ದರಾಮಯ್ಯ ಕಚೇರಿಯಿಂದ ಮೆಟಾಕ್ಕೆ ಪತ್ರ ಬರೆಯಲಾಗಿದ್ದು, ತಪ್ಪುಗಳನ್ನು ಸರಿಪಡಿಸುವಂತೆ ಒತ್ತಾಯಿಸಲಾಗಿತ್ತು. ಇದರ ಬೆನ್ನಲ್ಲೇ ಫೇಸ್ಬುಕ್ ಮಾತೃ ಸಂಸ್ಥೆ ಮೆಟಾ ಕ್ಷಮೆಯಾಚಿಸಿದೆ. ಅನುವಾದದಲ್ಲಿ ಕೆಲಕಾಲ ದೋಷ ಕಂಡುಬರಲು ಕಾರಣವಾಗಿದ್ದ ಅಂಶಗಳನ್ನು ನಾವು ಸರಿಪಡಿಸಿದ್ದೇವೆ. ಇಂಥ ಘಟನೆ ನಡೆದಿದ್ದಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ ಎಂದು ಮೆಟಾ ಹೇಳಿದೆ. ಇದನ್ನೂ ಓದಿ: ಪರಿಸರ ಹೆಸರಿನಲ್ಲಿ ಕಾಂಗ್ರೆಸ್ ಸಮಾವೇಶ: ಎಂ. ಸತೀಶ್ ರೆಡ್ಡಿ
