Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಜೆಪಿ ತನ್ನ ಹುಟ್ಟಿನಿಂದಲೇ‌ ಸಾಮಾಜಿಕ ನ್ಯಾಯದ ವಿರೋಧಿ: ಸಿಎಂ
  • Bangalore
  • Politics
  • State

ಬಿಜೆಪಿ ತನ್ನ ಹುಟ್ಟಿನಿಂದಲೇ‌ ಸಾಮಾಜಿಕ ನ್ಯಾಯದ ವಿರೋಧಿ: ಸಿಎಂ

admin July 18, 2025 1 minute read
Spread the love

ಮೈಸೂರು: ಯುವ ಕಾಂಗ್ರೆಸ್ ಸೇನಾನಿಗಳು ನಮ್ಮ ಸಂವಿಧಾನದ “ಸಮಾಜವಾದ” ಮತ್ತು “ಜಾತ್ಯತೀತ” ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ “ಯುವ ಶಕ್ರಿ ಪ್ರತಿಜ್ಞೆ 2025” ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಅಭಿನಂದಿಸಿ ಮಾತನಾಡಿದರು.

ಸಂಘ ಪರಿವಾರ ನಮ್ಮ ಸಂವಿಧಾನದಿಂದ ಜಾತ್ಯತೀತ ಮತ್ತು ಸಮಾಜವಾದವನ್ನು ತೆಗೆದು ಹಾಕಲು ಷಡ್ಯಂತ್ರ ನಡೆಸುತ್ತಿದೆ. ಬಿಜೆಪಿ ತನ್ನ ಹುಟ್ಟಿನಿಂದಲೇ‌ ಸಾಮಾಜಿಕ ನ್ಯಾಯದ ವಿರೋಧಿ ಆಗಿರುವುದರಿಂದ ಹೀಗೆ ಮಾಡುತ್ತಿದೆ. ಈ ಷಡ್ಯಂತ್ರವನ್ನು ರಾಜ್ಯದ ಮತ್ತು ದೇಶದ ಯುವ ಜನತೆ ಸೋಲಿಸಲು ಕಟ್ಟಿಬದ್ದವಾಗಿ ನಿಂತು ಹೋರಾಟ ಮುನ್ನಡೆಸುತ್ತದೆ ಎನ್ನುವ ಭರವಸೆ ತಮಗಿದೆ ಎಂದರು.

ಯುವ ಕಾಂಗ್ರೆಸ್ ಕಾರ್ಯಕರ್ತರು ಸೈದ್ಧಾಂತಿಕವಾಗಿ ಯಾವತ್ತೂ ರಾಜಿ ಮಾಡಿಕೊಳ್ಳಬಾರದು. ರಾಜಿ ಮಾಡಿಕೊಂಡವರು ರಾಜಕೀಯವಾಗಿ ಉಳಿಯುವುದಿಲ್ಲ, ಬೆಳೆಯುವುದಿಲ್ಲ ಎಂದು ಎಚ್ಚರಿಸಿದರು. ಬಿಜೆಪಿ ಪಕ್ಷಕ್ಕೆ ಭಾರತೀಯ ಸಮಾಜಕ್ಕೆ ಪೂರಕವಾದ ಸಿದ್ಧಾಂತವೇ ಇಲ್ಲ. ಸಮಾಜವನ್ನು ವಿಭಜಿಸುವ ಸಿದ್ಧಾಂತ ಬಿಜೆಪಿಯದ್ದು. ಜೆಡಿಎಸ್ ರಾಜ್ಯದ ಕೆಲವೇ ಸ್ಥಳಗಳಲ್ಲಿ ಅಸ್ತಿತ್ವದಲ್ಲಿದೆ. ಈ ಪಕ್ಷಕ್ಕೂ ಸರಿಯಾದ ಸಿದ್ಧಾಂತ ಇಲ್ಲ ಎಂದರು. ಇದನ್ನೂ ಓದಿ: ಕರ್ನಾಟಕ ಪಬ್ಲಿಕ್ ಶಾಲೆ ಉದ್ಘಾಟನೆ

ಮಂಟಲ್ ಕಮಿಷನ್ ವರದಿಯನ್ನು ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್, ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ಕೊಟ್ಟಿದ್ದು ನಮ್ಮ ಕಾಂಗ್ರಡಸ್ ಸರ್ಕಾರ. ಮಂಡಲ್ ವರದಿಯನ್ನು ವಿರೋಧಿಸಿದ್ದು ಇದೇ ಕಮಂಡಲವಾದಿಗಳು ಮತ್ತು ಮನುವಾದಿಗಳು. ಇವರ ಈ ಜನವಿರೋಧಿ ಇತಿಹಾಸವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ನೆನಪಿಡಬೇಕು ಎಂದರು.

ಮಹಿಳಾ ಮೀಸಲಾತಿ ಕೊಟ್ಟಿದ್ದು ಕಾಂಗ್ರೆಸ್. ರಾಜೀವ್ ಗಾಂಧಿ ಯವರು ಸಂವಿಧಾನಕ್ಕೆ ತಿದ್ದುಪಡಿ ತಂದು 35% ಮಹಿಳಾ ಮೀಸಲಾತಿ ತಂದರು. ಸೋನಿಯಾಗಾಂಧಿಯವರು ಈ ಮೀಸಲಾತಿಯನ್ನು 50% ಗೆ ಹೆಚ್ಚಿಸಲು ಹೋರಾಟ ಮಾಡಿದ್ದು ಸೋನಿಯಾಗಾಂಧಿ. ಇದನ್ನು ನೆನಪಿಡಬೇಕು ಎಂದರು.

 

 

About the Author

admin

Administrator

Visit Website View All Posts

Spread the love

Post navigation

Previous: ಕರ್ನಾಟಕ ಪಬ್ಲಿಕ್ ಶಾಲೆ ಉದ್ಘಾಟನೆ
Next: ಥೈಲ್ಯಾಂಡ್‌ನಲ್ಲಿ ಕಾಟೇರ ಫುಲ್ ಜಾಲಿ ಜಾಲಿ..!

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.