ಮೈಸೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿರುವುದರಿಂದ ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ ಅದ್ದೂರಿ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನಕ್ಕೆ ಮೈಸೂರು ನಗರದಲ್ಲಿ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಈಗಾಗಲೇ ಕಾರ್ಯಕ್ರಮವು ಕೂಡ ಪ್ರಾರಂಭವಾಗಿದೆ. ಇದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಎರಡು ವರ್ಷ ಪೂರೈಸಿದ ಸಾಧನಾ ಸಮಾವೇಶ. ಇದನ್ನೂ ಓದಿ: ಬಿಜೆಪಿಯ ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡುತ್ತಿದೆ: ಸಿಎಂ
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮವನ್ನು ಸಿದ್ದರಾಮಯ್ಯ ತಮ್ಮ ಶಕ್ತಿ ಮತ್ತು ಜನಪ್ರಿಯತೆ ಪ್ರದರ್ಶಿಸಲು ಬಳಸುತ್ತಿರುವುದು ಅಚ್ಚರಿ ಹುಟ್ಟಿಸುತ್ತದೆ. ಕೇವಲ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿ ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿರುವ ಸಿದ್ದರಾಮಯ್ಯ ಈ ಕಾರ್ಯಕ್ರಮ ಆಯೋಜಿಸಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಟೀಕೆಗೆ ಗುರಿಯಾಗುವುದು ನಿಶ್ಚಿತ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಸರ್ಕಾರದ ಈ ಸಮಾವೇಶವೂ ವಿರೋಧ ಪಕ್ಷಗಳಿಗೆ ಹಸಿದ ಹೊಟ್ಟೆಗೆ ಮೃಷ್ಟಾನ್ನ ಭೋಜನ ಆಗುತ್ತಾ ಎಂದು ಕಾದು ನೋಡಬೇಕಿದೆ.
