ಬೆಂಗಳೂರು: ನಮ್ಮ ದೇಶಕ್ಕೆ ಹೇಗೆ ಮೂರು ಬಣ್ಣದ ಬಾವುಟವಿದೆಯೋ ಅದೇ ರೀತಿ ನಮ್ಮ ಕರ್ನಾಟಕ ರಾಜ್ಯಕ್ಕೂ ಕೂಡ ಹಳದಿ ಮತ್ತು ಕೆಂಪು ಬಣ್ಣದ ಬಾವುಟವಿದೆ. ಹಳದಿ ಮತ್ತು ಕೆಂಪು ಬಣ್ಣದ ಬಾವುಟವನ್ನು ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಹೊಂದಿದೆ. ಈ ಬಾವುಟಕ್ಕೆ ಅಧಿಕೃತವಾಗಿ ಕೇಂದ್ರ ಸರ್ಕಾರದಿಂದ ಮಾನ್ಯತೆ ನೀಡುವಂತೆ ಕನ್ನಡ ಹಾಗೂ ಸಂಸ್ಕೃತಿ ಸಚಿವರಾದ ಶಿವರಾಜ್ ತಂಗಡಗಿ ಅವರು ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ.
ಈ ಮೊದಲು 2017ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ರಾಜ್ಯದ ಧ್ವಜದ ಕುರಿತಾಗಿ ಮನವಿ ಸಲ್ಲಿಸಿತ್ತು. ಮತ್ತೆ ಇದೀಗ ಸಚಿವ ಶಿವರಾಜ್ ತಂಗಡಗಿಯವರು ಕೇಂದ್ರ ಸರ್ಕಾರಕ್ಕೆ ಅಧಿಕೃತ ಮಾನ್ಯತೆ ನೀಡುವಂತೆ ಪತ್ರ ಸಲ್ಲಿಸಿದ್ದಾರೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಸಜ್ಜು!
ಇನ್ನು ಈ ಕುರಿತು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ಶೀಘ್ರದಲ್ಲೇ ತಂಗಡಗಿ ನೇತೃತ್ವದ ಶಿಷ್ಟಮಂಡಳಿ ನವದೆಹಲಿಗೆ ತೆರಳಿ, ಕೇಂದ್ರ ಸಂಸ್ಕೃತಿ ಸಚಿವರನ್ನು ಭೇಟಿಯಾಗಿ ಈ ಕುರಿತಂತೆ ಅಧಿಕೃತ ಮಾನ್ಯತೆ ನೀಡುವಂತೆ ಹಾಗೂ ಕನ್ನಡಕ್ಕೆ ಶಾಸ್ತ್ರೀಯ ಭಾಷೆಯಾಗಿ ಹೆಚ್ಚುವರಿ ಅನುದಾನ ನೀಡುವಂತೆ ಮನವಿ ಸಲ್ಲಿಸಲಿದೆ ಎಂದು ತಿಳಿಸಿದರು.
