ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್ ಪುರಂ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಶಾಸಕರಾದ ಬೈರತಿ ಬಸವರಾಜ್ ಅವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಈ ಕೇಸ್ಗೆ ಸಂಬಂಧಿಸಿದಂತೆ ಇಂದು (ಶನಿವಾರ ಜುಲೈ 19) ರಂದು ಬೈರುತಿ ಬಸವರಾಜ್ ಅವರು ವಿಚಾರಣೆಗೆ ಹಾಜರಾದರೂ.
ಹೌದು, ಬಿಕ್ಲು ಶಿವ ಅಲಿಯಾಸ್ ಶ್ರೀನಿವಾಸ ಕೊಲೆ ಪ್ರಕರಣದಲ್ಲಿ A5 ಆರೋಪಿಯಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿಚಾರಣೆಗೆ ಹಾಜರಾಗಿದ್ದಾರೆ. ಭಾರತೀನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜಾರಾಗಿದ್ದಾರೆ. ಕೊ*ಲೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದ ಹಿನ್ನೆಲೆ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಆದೇಶ ನೀಡಿತ್ತು. ಈ ಬೆನ್ನಲ್ಲೇ ವಿಚಾರಣೆಗೆ ಆಗಮಿಸಿದ್ದರು. ಇದನ್ನೂ ಓದಿ: ಬೈರತಿ ಬಸವರಾಜ್ಗೆ ಶುರುವಾಯಿತು ಮತ್ತಷ್ಟು ಸಂಕಷ್ಟ
