ಬೆಂಗಳೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಅವರ 83ನೇ ಹುಟ್ಟು ಹಬ್ಬದ ಸಂಭ್ರಮಾಚರಣೆಯನ್ನು ಹಲವೆಡೆ ಬಹಳ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅದರಂತೆ ಕರ್ನಾಟಕ ಅಂಧರ ಕ್ಷೇಮಾಭ್ಯುದಯ ಸಂಸ್ಥೆಯ ಅಂಧ ಮಕ್ಕಳೊಂದಿಗೆ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಜನ್ಮದಿನವನ್ನು ಆಚರಿಸಿದರು.
ಕಲ್ಯಾಣ ಕರ್ನಾಟಕದ ರೂವಾರಿಗಳು ಆದ ಮಲ್ಲಿಕಾರ್ಜುನ್ ಖರ್ಗೆ ರವರು ಅತ್ಯಂತ ದಕ್ಷ ಆಡಳಿವನ್ನು ದೇಶಕ್ಕೆ ಹಾಗೂ ರಾಜ್ಯಕ್ಕೆ ನೀಡಿದ್ದಾರೆ. ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಇಂದು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುತ್ತಿರುವ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಅತ್ಯಂತ ಸಮರ್ಥನೀಯವಾಗಿ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ದೇಶದ ಜನರ ಮುಂದೆ ಇಟ್ಟು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿ ಇಡೀ ದೇಶದಾದ್ಯಂತ ಬಾಬಾ ಸಾಹೇಬಾ ಅಂಬೇಡ್ಕರ್ ಅವರ ಮಾರ್ಗದರ್ಶನದಂತೆ ದೇಶದಲ್ಲಿ ಶಾಂತಿ ಹಾಗೂ ಅಭಿವೃದ್ಧಿಯತ್ತ ಕೊಂಡೊಯ್ಯಲು ಅತ್ಯಂತ ಪ್ರಾಮಾಣಿಕತೆಯಿಂದ ಶ್ರೀ ಮಲ್ಲಿಕಾರ್ಜುನ ಖರ್ಗೆ ರವರು ಶ್ರಮಿಸುತ್ತಿದ್ದಾರೆ. ಇದನ್ನೂ ಓದಿ: ಪತ್ರಕರ್ತರು ಸಮಾಜದ 4ನೇ ಕಣ್ಣು ಇದ್ದಂತೆ: ಎಂ.ಬಿ. ಪಾಟೀಲ
ಇವರ ಜನುಮದಿನವನ್ನು ಅತ್ಯಂತ ಸರಳವಾಗಿ ಅಂಧ ಮಕ್ಕಳೊಂದಿಗೆ ಆಚರಿಸುವುದರ ಮೂಲಕ ಅಂಧ ಮಕ್ಕಳು ಮಲ್ಲಿಕಾರ್ಜುನ ಖರ್ಗೆ ರವರಿಗೆ ಜನುಮ ದಿನದ ಶುಭಾಶಯಗಳನ್ನು ಕೋರಿದರು.
ಮಲ್ಲಿಕಾರ್ಜುನ ಖರ್ಗೆ ರವರಿಗೆ ಇನ್ನು ಹೆಚ್ಚಿನ ಆರೋಗ್ಯ ಭಾಗ್ಯ ಕರುಣಿಸಲೆಂದು ಇದೇ ಸಂದರ್ಭದಲ್ಲಿ ಪ್ರಾರ್ಥಿಸಲಾಯಿತು. ಇವರು ಕನ್ನಡಿಗರಾಗಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿಕೊಂಡು ಪಕ್ಷದ ಸಂಘಟನೆಗೆ ಹಾಗೂ ಕಾರ್ಯಕರ್ತರಿಗೆ ಹೆಚ್ಚಿನ ಒತ್ತನ್ನು ನೀಡುತ್ತಿದ್ದಾರೆ ಎಂದರು.
