Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹಗಲಿರಲಿ ಇರುಳಿರಲಿ ನಗರಸಭೆಯವರು ಮಲಗಿರಲಿ..!
  • State

ಹಗಲಿರಲಿ ಇರುಳಿರಲಿ ನಗರಸಭೆಯವರು ಮಲಗಿರಲಿ..!

admin July 22, 2025
Spread the love

ಶಹಾಪುರ: ಸೋಮವಾರ (ಜುಲೈ 21) ತಡರಾತ್ರಿ ಸುರಿದ ಭಾರಿ ಮಳೆಗೆ ನಗರದಲ್ಲಿ ಅಲ್ಲಲ್ಲಿ ಅಕ್ಷರಶಃ ಮಲೆನಾಡಿನಂತೆ ಭಾಸವಾಗುತ್ತಿದೆ. ಮಳೆಯಿಂದ ನಗರದಲ್ಲಿ ಅವಾಂತರಗಳು ಸೃಷ್ಠಿಯಾಗಿದೆ. ರಸ್ತೆ ಗುಂಡಿಗಳಲ್ಲಿ ನೀರು ನಿಂತಿದೆ. ಇನ್ನೂ ಕೇಲವು ರಸ್ತೆಗಳಲ್ಲಿ ಮೊಣಕಾಲಿನ ವರೆಗೆ ನೀರು ನಿಂತಿದೆ. ಇದರಿಂದ ಸಾರ್ವಜನಿಕರು ಹಗಲಿರಲಿ, ಇರುಳಿರಲಿ ನಗರಸಭೆಯವರು ಮಲಗಿರಲಿ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಭಾರಿ ಮಳೆಯಿಂದ ರಸ್ತೆ ತುಂಬೆಲ್ಲಾ ನೀರು ಆವರಿಸಿಕೊಂಡಿದ್ದರಿಂದ ವಾಹನ ಸವಾರರು ಪರದಾಡಿದ್ದಾರೆ. ಕೆಲವು ಕಡೆ ಗಟಾರು ತುಂಬಿ ರಸ್ತೆ ಮೇಲೆ ಕೊಳಚೆ ನೀರು ಹರಿಯುತ್ತಿದೆ. ಪ್ರತಿ ಸಾರಿ ಮಳೆ ಬಂದರು ಸಹ ಇದೇ ಅವಾಂತರವಾಗಿದ್ದು, ಮುನ್ನಚ್ಚರಿಕಾ ಕ್ರಮಗಳಾದರೆ ಇಂತಹ ಅವಾಂತರಗಳು ಮರುಕಳಿಸುವುದಿಲ್ಲಾ. ಆದರೆ ಎಚ್ಚೆತ್ತುಕೊಳ್ಳದ ನಗರಸಭೆಯಿಂದಾಗಿ ಜನತೆ ರೋಸಿ ಹೋಗಿದ್ದಾರೆ. ಹಲವೇಡೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಕೇಲವೆಡೆ ಮನೆಗಳಿಗೆ ನೀರು ನುಗ್ಗಿವೆ. ಇನ್ನೂ ಬಿಡದೇ ಮಳೆ ಸುರಿಯುತ್ತಿದ್ದು, ಮಳೆರಾಯ ಮತ್ತೆ ಯಾವ ಅವಾಂತರ ಸೃಷ್ಠಿಸುತ್ತಾನೆ ಅಂತ ಜನರು ಆತಂಕದಲ್ಲೇ ಕಾಲ ಕಳೆಯುತ್ತಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣಕ್ಕೆ ಎಸ್ಐಟಿ ತಂಡ ರಚನೆ ಬಗ್ಗೆ ಗೃಹ ಸಚಿವರು ಹೇಳಿದ್ದೇನು

ಸೇತುವೆ, ಚರಂಡಿ ನಿರ್ಮಾಣಕ್ಕೆ ಭರವಸೆ

ನಗರದ ವಾರ್ಡ್ ನಂ.25 ರಲ್ಲಿ ಮಳೆ ಅವಾಂತರಕ್ಕೆ ಸೇತುವೆ ಕೊಚ್ಚಿ ಹೋಗಿದ್ದು ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ಅವರು ಬೇಟಿ ನೀಡಿ ವೀಕ್ಷಿಸಿದರು. ಬಳಿಕ ಮಾತನಾಡಿದ ಅವರು 2 ಸೇತುವೆ, ಚರಂಡಿ ನಿರ್ಮಾಣಕ್ಕೆ ಅನುದಾನ ನೀಡಿ ಜನಸಾಮಾನ್ಯರ ಸಂಚಾರಕ್ಕೆ ಅನುಕೂಲ ಮಾಡಿ ಕೊಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಅಶೋಕ್ ನಾಯಕ ಸೇರಿದಂತೆ ಬಡಾವಣೆ ಜನತೆ ಇದ್ದರು.

ಬಿಸಿಯೂಟ ಸಿಬ್ಬಂದಿಗಳ ಮೇಲೆ ದರ್ಪ

ನಗರದ ಕೇಲ ಸರ್ಕಾರಿ ಶಾಲೆಗಳಿಗೆ ನಗರಸಭೆ ಅಧಿಕಾರಿಗಳು ರಾಜಕೀಯ ನಾಯಕರ ಒತ್ತಡಕ್ಕೆ ಮಣಿದು ಸುಖಸುಮ್ಮನೆ ಸರ್ಕಾರಿ ಶಾಲೆಗಳಿಗೆ ಬೇಟಿ ನೀಡಿ ನಿರ್ಲಕ್ಷದ ಹೆಸರಿನಲ್ಲಿ ಬಿಸಿಯೂಟ ಸಿಬ್ಬಂದಿಗಳ ಮೇಲೆ ದರ್ಪ ತೋರಿ ಅಮಾನತು ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಸಿಯೂಟ ಸಿಬ್ಬಂದಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ. ಆರೋಪಗಳಿದ್ದರೆ ಸಾಬೀತು ಮಾಡಲಿ ಅದನ್ನು ಬಿಟ್ಟು ಅನಕ್ಷರಸ್ಥ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ನೊಂದ ಕೇಲ ಮಹಿಳೆಯರು ನಗರಸಭೆ ಪೌರಾಯುಕ್ತರ ವಿರುದ್ಧ ಕಿಡಿಕಾರಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಧರ್ಮಸ್ಥಳ ಪ್ರಕರಣಕ್ಕೆ ಎಸ್ಐಟಿ ತಂಡ ರಚನೆ ಬಗ್ಗೆ ಗೃಹ ಸಚಿವರು ಹೇಳಿದ್ದೇನು?
Next: ಸಿಎಂ ಅಧ್ಯಕ್ಷತೆಯಲ್ಲಿ ಕುಸುಮ್ ಬಿ ಯೋಜನೆ ಸಭೆ

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.