Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇ-ಖಾತಾ ಮೇಳ
  • Bangalore
  • Politics
  • State

ಇ-ಖಾತಾ ಮೇಳ

admin July 22, 2025 1 minute read
Spread the love

ಬೆಂಗಳೂರು: ಇ-ಖಾತಾ ಮೇಳವು ಮನೆ ಮನೆಗೆ ಇ-ಖಾತೆಯನ್ನು ತಲುಪಿಸುವ ಸದುದ್ದೇಶವನ್ನು ಹೊಂದಿರುವ ಅರ್ಥಪೂರ್ಣ ಕಾರ್ಯಕ್ರಮ ಎಂದು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವರಾದ  ಬಿ.ಎಸ್.ಸುರೇಶ್ ರವರು ತಿಳಿಸಿದರು.

ಪಾಲಿಕೆಯ ಹೆಬ್ಬಾಳ‌ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್.ಟಿ.ನಗರದ ಹೆಚ್.ಎಮ್.ಟಿ ಮೈದಾನದಲ್ಲಿ ದಿನಾಂಕ 22 ಹಾಗೂ 23 ಜುಲೈ 2025 ರಂದು ಆಯೋಜಿಸಿರುವ ಬೃಹತ್ ಇ-ಖಾತಾ ಮೇಳಕ್ಕೆ ಇಂದು ಚಾಲನೆ ನೀಡಿ ಮಾತನಾಡಿದ ಅವರು, ಇ-ಖಾತಾ ನಿಮ್ಮ ಆಸ್ತಿ, ನಿವೇಶನಗಳ ಮಾಲೀಕತ್ವಕ್ಕೆ ಇರುವ ಅಧಿಕೃತ ದಾಖಲೆ ಎಂದು ತಿಳಿಸಿದರು.

ಈಗಾಗಲೇ ಹೆಬ್ಬಾಳ‌ ವಿಧಾನಸಭಾ ಕ್ಷೇತ್ರದಲ್ಲಿ 50,000 ಸ್ವತ್ತುಗಳ ಪೈಕಿ 13,000 ಸ್ವತ್ತುಗಳಿಗೆ ಅಂತಿಮ ಇ-ಖಾತಾವನ್ನು ನೀಡಲಾಗಿದೆ. ನಾಗರೀಕರು ಇ-ಖಾತಾ ಮೇಳದ ಸದುಪಯೋಗ ಪಡೆದು, ಅಗತ್ಯ ದಾಖಲೆಗಳನ್ನು ಸಲ್ಲಿಸಿ ಸುಲಭವಾಗಿ ಇ-ಖಾತಾವನ್ನು ಪಡೆಯುವಂತೆ ನಾಗರೀಕರಲ್ಲಿ ವಿನಂತಿಸಿದರು.

ಪೂರ್ವ ವಲಯದ ಆಯುಕ್ತರಾದ ಶ್ರೀಮತಿ ಸ್ನೇಹಲ್.ಆರ್ ರವರು ಮಾತನಾಡಿ ಪೂರ್ವ ವಲಯದಲ್ಲಿ ಇ-ಖಾತಾ ಮೇಳದ ಆಯೋಜನೆಯ ಮೂಲಕ‌ ಸುಲಭವಾಗಿ ಇ-ಖಾತಾ ನೀಡಲು ವ್ಯವಸ್ಥೆ ಮಾಡಲಾಗಿದೆ. ಪೂರ್ವ ವಲಯದಲ್ಲಿ ಒಟ್ಟು 3,45,858 ಸ್ವತ್ತುಗಳ ಪೈಕಿ 55,917 ಸ್ವತ್ತುಗಳಿಗೆ ಅಂತಿಮ ಇ-ಖಾತಾವನ್ನು ನೀಡಲಾಗಿದೆ ಎಂದು ತಿಳಿಸಿದರು.

ಇ-ಖಾತಾ ಮೇಳದ‌ ಸೌಲಭ್ಯವನ್ನು ಹೆಚ್ಚಿನ ಜನರಿಗೆ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ, ಆರ್.ಟಿ.ನಗರದ ಹೆಚ್.ಎಮ್.ಟಿ ಮೈದಾನದಲ್ಲಿ ಈ ಮೇಳವನ್ನು ನಾಳೆಯೂ ಮುಂದುವರೆಸಲಾಗುತ್ತದೆ.  ಇ-ಖಾತಾ ಪಡೆಯಬೇಕಿರುವ ನಾಗರಿಕರು ತಮ್ಮ ಅಗತ್ಯ ದಾಖಲೆಗಳೊಂದಿಗೆ ಸ್ಥಳಕ್ಕೆ ಆಗಮಿಸಿ ಇ-ಖಾತಾ ಪಡೆಯುವಂತೆ ಅವರು ತಿಳಿಸಿದರು. ಇದನ್ನೂ ಓದಿ: ಇ.ಡಿ. ಸಂಸ್ಥೆ ರಾಜಕೀಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ: ಡಿ.ಕೆ. ಸುರೇಶ್

ಈ ವೇಳೆ ಮಾಜಿ ಉಪ ಮಹಾಪೌರರು,ವಲಯ ಆಯುಕ್ತರಾದ ಸ್ನೇಹಲ್.ಆರ್, ಜಂಟಿ ಆಯುಕ್ತರಾದ ಸರೋಜ,  ಉಪ ಆಯುಕ್ತರಾದ ರಾಜು, ಕಂದಾಯ ಅಧಿಕಾರಿ ಶ್ರೀನಿವಾಸ್ ಮೂರ್ತಿ, ಕಾರ್ಯಪಾಲಕ ಅಭಿಯಂತರರು ಚಂದ್ರಶೇಖರ್, ಮಾಜಿ ಪಾಲಿಕೆ ಸದಸ್ಯರುಗಳು, ಸ್ಥಳೀಯ ಹಿರಿಯ ಮುಖಂಡರುಗಳು, ಹಾಗೂ‌ ಇತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಇ.ಡಿ. ಸಂಸ್ಥೆ ರಾಜಕೀಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ: ಡಿ.ಕೆ. ಸುರೇಶ್
Next: ಐಟಿಐ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಅವಕಾಶಕ್ಕಾಗಿ ಬಜಾಜ್ ಆಟೋ ಜೊತೆ ಶೀಘ್ರದಲ್ಲೇ ಒಪ್ಪಂದ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.