ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅದರಲ್ಲಿ ಪ್ರಮುಖ ಯೋಜನೆಯಾದ ಶಕ್ತಿ ಯೋಜನೆಯಿಂದ ಈಗಾಗಲೇ ರಾಜ್ಯದಲ್ಲಿ ಶಕ್ತಿ ಯೋಜನೆಯಿಂದ 500 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣ ಬೆಳೆಸಿ ಇತಿಹಾಸ ಸೃಷ್ಟಿಸಿದೆ. ಅಲ್ಲದೆ ಮತ್ತೆ ಇದೀಗ ಶಕ್ತಿ ಯೋಜನೆಯಿಂದ ಮಹಿಳಾ ಉದ್ಯೋಗಸ್ಥರ ಸಂಖ್ಯೆಯು ಕೂಡ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ಶಕ್ತಿ ಯೋಜನೆಯಡಿ ಮಹಿಳೆಯರು ಬಸ್ಗಳಲ್ಲಿ ಉಚಿತವಾಗಿ ಓಡಾಡಲು ಆರಂಭಿಸಿದ ಬಳಿಕ ಬೆಂಗಳೂರು, ಹುಬ್ಬಳ್ಳಿ- ಧಾರಾವಾಡದಲ್ಲಿ ಉದ್ಯೋಗಸ್ಥ ಮಹಿಳೆಯರ ಪ್ರಮಾಣ ಹೆಚ್ಚಾಗಿದೆ ಎಂದು ಸಸ್ಟೈನೇಬಲ್ ಮೊಬಿಲಿಟಿ ನೆಟ್ವರ್ಕ್ ನಡೆಸಿದ ಸಮೀಕ್ಷಾ ವರದಿ ಹೇಳಿದೆ.
ಶಕ್ತಿ ಯೋಜನೆಯಿಂದಾಗಿ ಮಹಿಳೆಯರ ಔದ್ಯೋಗಿಕ ದರವು ಬೆಂಗಳೂರಿನಲ್ಲಿ ಶೇ.23 ಮತ್ತು ಹುಬ್ಬಳ್ಳಿ – ಧಾರಾವಾಡದಲ್ಲಿ ಶೇ.21 ರಷ್ಟು ಏರಿಕೆಯಾಗಿರುವುದು ಅಧ್ಯಯನದಿಂದ ಬಹಿರಂಗವಾಗಿದೆ. ಮಹಿಳೆಯರಿಗೆ ಈ ಯೋಜನೆಯಿಂದಾಗಿ ಶೇ.30 ರಿಂದ ಶೇ.50 ರಷ್ಟು ಖರ್ಚು ಕಡಿಮೆಯಾಗುತ್ತಿರುವುದಾಗಿ ಸ್ವತಃ ಅವರೇ ಸಮೀಕ್ಷೆಯ ವೇಳೆ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಆಗುತ್ತಿರುವ ಅನ್ಯಾದ ಬಗ್ಗೆ ಕೇಂದ್ರ ಸಚಿವರು, ಸಂಸದರು ಗಮನಹರಿಸಬೇಕು: ಡಿಕೆಸು
ಮಹಿಳೆಯರಿಗೆ ಆರ್ಥಿಕ ಬಲ ತುಂಬಿ, ಅವರನ್ನು ಸ್ವಾವಲಂಬಿಯಾಗಿಸುವ ಉದ್ದೇಶದ ಈ ಯೋಜನೆಯ ಬಗೆಗೆ ಕೇಳಿಬಂದ ಟೀಕೆಗಳು, ವ್ಯವಸ್ಥಿತ ಅಪಪ್ರಚಾರ ಎಲ್ಲವೂ ಸಾಧನೆಯ ಮುಂದೆ ಮಂಡಿಯೂರಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ವ್ಯಾಪಕ ಪ್ರಶಂಸೆಗೆ ಒಳಗಾಗಿರುವ ನಮ್ಮ ಗ್ಯಾರಂಟಿ ಯೋಜನೆಗಳು ಇಂದು ನಾಡಿನ ಜನರ ತಲಾದಾಯ ಹೆಚ್ಚಿಸಿ, ಅವರ ಬದುಕಿಗೆ ಆರ್ಥಿಕ ಭದ್ರತೆ ಕಲ್ಪಿಸಿದೆ.
ನಮ್ಮ ಯೋಜನೆಯೊಂದು ನಿರೀಕ್ಷೆಗೂ ಮೀರಿ ಸಾಧನೆ ಮಾಡಿದರೆ ನನಗೆ ಅದಕ್ಕಿಂತ ಹೆಚ್ಚು ಸಂತಸದ ವಿಷಯ ಬೇರೆ ಇಲ್ಲ ಎಂದು ಬರೆದು ಕೊಂಡಿದ್ದಾರೆ.

