ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಈಗಾಗಲೇ ಹಲವಾರು ಟೀಕೆಗಳು ಮೂಡಿಬರುತ್ತವೆ, ಇದರ ಬನಲ್ಲೆ ಮತ್ತೆ ಇದೀಗ ಬಿಜೆಪಿ ಪಕ್ಷದ ವಿರೋಧ ನಾಯಕರದ ಆರ್ ಅಶೋಕ್ ಅವರು ಈ ಕುರಿತು ವ್ಯಂಗ್ಯವಾಡಿದ್ದಾರೆ.ಎಸ್ಸಿ, ಎಸ್ಟಿ ಪರಿಶಿಷ್ಟ ಪಂಗಡಗಳ ಅನುದಾನವನ್ನು ಪಂಚ ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಬಳಸುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪ್ರಸಕ್ತ ಸಾಲಿನ (2025-26) ಬಜೆಟ್ ನಲ್ಲಿ SCSP/TSP ಅಡಿ ಪರಿಶಿಷ್ಠ ಸಮುದಾಯಗಳಿಗೆ ಒದಗಿಸಿ ಒಟ್ಟು ₹42,017.51 ಕೋಕೋಟಿ ಅನುದಾನದಲ್ಲಿ ₹11,896.84 ಕೋಟಿ ಹಣವನ್ನ ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿರುವ ದಲಿತ ವಿರೋಧಿ @INCKarnataka ಸರ್ಕಾರ ಮತ್ತೊಮ್ಮೆ ಪರಿಶಿಷ್ಟ ಸಮುದಾಯಗಳಿಗೆ ದ್ರೋಹ ಬಗೆಯಲು ಹೊರಟಿದೆ.
ಸ್ವಾಮಿ ಸಿದ್ದರಾಮಯ್ಯನವರೇ, ಅನುದಾನ ಹಂಚಿಕೆ ಮಾಡಲು ಹಣವಿಲ್ಲದ ಮೇಲೆ ಸುಮ್ಮನೆ ಕಾಟಾಚಾರಕ್ಕೆ ಬಜೆಟ್ ನಲ್ಲಿ ಘೋಷಣೆ ಮಾಡುವುದಾದರೂ ಯಾತಕ್ಕೆ? ಬಜೆಟ್ ನಲ್ಲಿ ಅವಾಸ್ತವಿಕ ಘೋಷಣೆಗಳನ್ನು ಮಾಡಿ, ಪರಿಶಿಷ್ಟರ ಮೂಗಿಗೆ ತುಪ್ಪ ಸವರಿ, ಬಿಟ್ಟಿ ಪ್ರಚಾರ ಪಡೆದುಕೊಂಡರೆ ಪರಿಶಿಷ್ಟ ಸಮುದಾಯಗಳ ಕಲ್ಯಾಣ ಆಗುತ್ತಾ? ಇದೇನಾ ತಮಗೆ ಪರಿಶಿಷ್ಟ ಸಮುದಾಯಗಳ ಬಗ್ಗೆ ಇರುವ ಬದ್ಧತೆ? ಇದೇನಾ ತಾವು ಭಾಷಣ ಬಿಗಿಯುವ ಸಾಮಾಜಿಕ ನ್ಯಾಯ?. ಇದನ್ನೂ ಓದಿ: ಎ-ಖಾತಾ ಪಡೆಯಲು ಯಾರಿಗೂ ಲಂಚ ನೀಡಬೇಡಿ: ಮಹೇಶ್ವರ ರಾವ್
ಒಂದು ಕಡೆ ಬಿಡುಗಡೆ ಮಾಡಿರುವ ಅಲ್ಪ ಸ್ವಲ್ಪ ಅನುದಾನವನ್ನ ಭ್ರಷ್ಟಾಚಾರದ ಮೂಲಕ ಲೂಟಿ ಹೊಡೆಯುತ್ತೀರಿ, ಮತ್ತೊಂದು ಕಡೆ ಘೋಷಣೆ ಮಾಡಿದ ಅನುದಾನವನ್ನ ಹಂಚಿಕೆ ಮಾಡದೆ ಬಾಕಿ ಉಳಿಸಿಕೊಳ್ಳುತ್ತೀರಿ. ನಾಚಿಕೆಯಾಗಬೇಕು ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ. ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಅನ್ನುವುದು ಇದ್ದರೆ ಇನ್ನೆಂದೂ ಅಹಿಂದ ಹೆಸರಿನಲ್ಲಿ ರಾಜಕೀಯ ಮಾಡಬೇಡಿ ಎಂದು ಬರೆದುಕೊಂಡಿದ್ದಾರೆ.
