ಚಿಕ್ಕಬಳ್ಳಾಪುರ: ಗೌರಿಬಿದನೂರು ಅಕ್ರಮ ಆಸ್ತಿ ಗಳಿಕೆ ಆರೋಪ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಎಂ.ಆಂಜನೇಯಮೂರ್ತಿ ಮನೆ, ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ಎಂ.ಆಂಜನೇಯಮೂರ್ತಿ ಗೌರಿಬಿದನೂರು ತಾಲೂಕಿನ ಕಿರಿಯ ಇಂಜಿನಿಯರ್. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು, ಯಲಹಂಕದ ಮನೆ, ಜಕ್ಕೂರು ಕಾಂಪ್ಲೇಕ್ಸ್, ತುಮಕೂರು, ಮಧುಗಿರಿ ಸೇರಿದಂತೆ ಗೌರಿಬಿದನೂರು ಕಚೇರಿ ಮೇಲೆ ದಾಳಿ ನಡೆದಿದೆ. ನಾಲ್ಕು ತಂಡಗಳಾಗಿ ಲೋಕಾಯುಕ್ತ ಅಧಿಕಾರಿಳಿಂದ ಕಾರ್ಯಾಚರಣೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಜೆ.ಕೆ. ಆ್ಯಂಟೊಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
