ಮಂಗಳೂರು: ರಾಜ್ಯದ ಜನರ ನಿದ್ದೆಗೆಡಿಸಿರುವ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರ್ನಾಲ್ಕು ದಿನಗಳಿಂದ ಎಸ್ಐಟಿ ಅಧಿಕಾರಿಗಳು ಹೂತಿಕ್ಕಿದ್ದ ಅಸ್ತಿ ಪಂಜರ ಗೋಸ್ಕರ ಈಗಾಗಲೇ ಎಲ್ಲಾ ರೀತಿ ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಐದು ಕಡೆ ಕಾರ್ಯಾಚರಣೆ ನಡೆಸಿದರು ಕೂಡ ಯಾವುದೇ ಅಸ್ತಿಪಂಜರ ಸಿಗದೇ ವಾಪಸ್ ಆಗಿದ್ದರು. ಆದರೀಗ ದೂರುದಾರ ಗುರುತಿಸಿದ ಆರನೇ ಪಾಯಿಂಟ್ ನಲ್ಲಿ ಇಂದು (ಗುರುವಾರ ಜುಲೈ 31 ರಂದು ಎರಡು ಅಸ್ತಿಪಂಜರಗಳು ಸಿಕ್ಕಿವೆ ಎಂದು ಎಸ್ಐಟಿ ಮೂಲಗಳಿಂದ ತಿಳಿಸಿವೆ.
ಹೌದು, ದೂರುದಾರ ಗುರುತಿಸಿದ್ದ 6ನೇ ಪಾಯಿಂಟ್ನಲ್ಲಿ 2 ಅಸ್ಥಿಪಂಜರಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು, 6ನೇ ಪಾಯಿಂಟ್ನಲ್ಲಿ 15 ಕಾರ್ಮಿಕರಿಂದ ಉತ್ಖನನ ನಡೆಯುತ್ತಿದ್ದು, ಎರಡು ಅಸ್ಥಿಪಂಜರ ಪತ್ತೆಯಾಗಿದೆ. ದೇಹದ ಪೂರ್ತಿ ಭಾಗಗಳು ಸಿಕ್ಕಿಲ್ಲ, ತಲೆ ಬುರುಡೆ ಸೇರಿದಂತೆ ಕೆಲವು ಭಾಗಗಳು ಮಾತ್ರ ಸಿಕ್ಕಿದ್ದು, ಇನ್ನೂ ಆಳಕ್ಕೆ ತೆಗೆದು ಹುಡುಕಾಟ ನಡೆಸಲಾಗುತ್ತಿದೆ. ಸದ್ಯ ಸಿಕ್ಕಿರುವ ಕಳೇಬರವನ್ನು ಎಸ್ಐಟಿ ಅಧಿಕಾರಿಗಳು ಎಫ್ಎಸ್ಎಲ್ಗೆ ಕಳುಹಿಸಲಿದ್ದಾರೆ. ಇನ್ನೂ ಇದರ ಬಳಿಕ 7 ಹಾಗೂ 8ನೇ ಪಾಯಿಂಟ್ನಲ್ಲಿ ಉತ್ಖನನ ಕಾರ್ಯ ನಡೆಸುವ ಸಾಧ್ಯತೆಗಳಿವೆ. ಇದನ್ನೂ ಓದಿ: ಮುಂದಿನ KMF ಅಧ್ಯಕ್ಷ ನಾನೇ: ನಂಜೇಗೌಡ
ಅಲ್ಲದೆ ಎಸ್ಐಟಿ ವಿಚಾರಣೆ ವೇಳೆ ದೂರುದಾರ ವ್ಯಕ್ತಿ ಓರ್ವ ನಿವೃತ್ತ ಪೊಲೀಸ್ ಅಧಿಕಾರಿಯ ಹೆಸರನ್ನು ಬಾಯ್ಬಿಟ್ಟಿದ್ದ. ನಾನು ಹೆಣ ಹೂಳುವಾಗ ಈ ಅಧಿಕಾರಿ ಕೂಡ ನನಗೆ ಸಾಥ್ ನೀಡಿರುವುದಾಗಿ ತಿಳಿಸಿದ್ದ. ದೂರುದಾರನ ಮಾಹಿತಿ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು 1995ರಿಂದ ಧರ್ಮಸ್ಥಳ ಔಟ್ ಪೋಸ್ಟ್ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡಿದವರ ಲಿಸ್ಟ್ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ಮನವಿ ಪತ್ರ ಕಳುಹಿಸಿದ್ದರು.
