ಬೆಂಗಳೂರು: ಮದುವೆ ಮಾಡಿಕೊಳ್ಳುವುದಾಗಿ ಅತ್ಯಾಚಾರವ್ಯಸಗಿ ಮೋಸ ಮಾಡಿದ್ದಾರೆ ಎಂದು ಬಿಜೆಪಿಯ ಶಾಸಕ ಪ್ರಭು ಚೌಹಾಣ್ ಅವರ ಪುತ್ರ ಪ್ರತೀಕ್ ವಿರುದ್ಧ ದೂರು ದಾಖಲಾಗಿದ್ದು, ಈ ದೂರಿನ ವಿರುದ್ಧ ನಿರೀಕ್ಷಕ ಜಾಮೀನು ಅರ್ಜಿಯನ್ನು ಸಲ್ಲಿಸಿದರು ಆದರೆ ಈ ಜಿಲ್ಲಾ ಸತ್ರ ನ್ಯಾಯಾಲಯ ವಜಾ ಮಾಡಿ ಆದೇಶ ಹೊರಡಿಸಿದೆ ಇದರಿಂದ ಪ್ರಭು ಚೌಹಾಣ್ ಪುತ್ರ ಪ್ರತೀಕ್ ಅವರಿಗೆ ಬಂಧನದ ಭೀತಿ ಶುರುವಾಗಿದೆ.
ಪ್ರತೀಕ್ ಪರ ವಕೀಲ ಎಂ.ಎಂ.ಗೋಡ್ಬಲೆಯವರು ನಿರೀಕ್ಷಣಾ ಜಾಮೀನಿಗಾಗಿ ಮಂಗಳವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ್ದ ಕೋರ್ಟ್ ಗುರುವಾರಕ್ಕೆ ತೀರ್ಪನ್ನು ಕಾಯ್ದಿರಿಸಿತ್ತು. ಬಳಿಕ ಜಾಮೀನು ನೀಡದಂತೆ ಕೋರ್ಟ್ಗೆ ಸಂತ್ರಸ್ತೆ ಪರ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಬೆನ್ನಲ್ಲೇ ಬಿಜೆಪಿ ಶಾಸಕ ಚೌಹಾಣ್ ಪುತ್ರನಿಗೆ ಬಂಧನ ಭೀತಿ ಹೆಚ್ಚಾಗಿದೆ. ಈಗಾಗಲೇ ಬೀದರ್ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇದನ್ನೂ ಓದಿ: ಇಂದಿನ ಕೋರ್ಟ್ ತೀರ್ಪಿನ ಮೇಲಿದೆ ಮುಂದಿನ ಪ್ರಜ್ವಲ್ ರೇವಣ್ಣನ ಭವಿಷ್ಯ
