ಬೆಂಗಳೂರು: ಅತ್ಯಾ*ಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.
ಇನ್ನು ಜೈಲು ಸೆರೆವಾಸವನ್ನು ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಅವರಿಗೆ ಖೈದಿ ನಂಬರ್ ನೀಡುವುದರ (15528) ಜೊತೆಗೆ ಸಜಾಬಂದಿ ಕೊಠಡಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಜೈಲಿನಲ್ಲಿ ಸೆರೆವಾಸ ಅನುಭವಿಸುವ ಎಲ್ಲಾ ಕೈತಿಗಳಿಗೂ 8 ಗಂಟೆ ಕೆಲಸ ಮಾಡಬೇಕಾಗುತ್ತದೆ. ಅದರಂತೆ ಇದೀಗ ಪ್ರಜ್ವಲ್ ರೇವಣ್ಣ ಅವರಿಗೂ ಕೂಡ 8 ಕೆಲಸ ಮಾಡಲು ತಿಳಿಸಲಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪ್ರತಾಪ್ ಸಿಂಹ ಕಿಡಿ
ಅಲ್ಲದೆ ಪ್ರಜ್ವಲ್ ರೇವಣ್ಣ ಅವರಿಗೆ ಜೈಲಿನ ಒಳಾಂಗಣದಲ್ಲಿರುವ ಬೇಕರಿ, ತೋಟದ ಕೆಲಸ, ಗಾರ್ಡನ್ ಕಾರ್ಯ, ಮರಗೆಲಸ, ಹೈನುಗಾರಿಕೆ ಹಾಗೂ ಸ್ವಚ್ಚತೆ ಕೆಲಸಗಳಲ್ಲಿ ತೊಡಗಿಕೊಳ್ಳುವ ಆಯ್ಕೆಗಳು ನೀಡಲಾಗಿವೆ. ಇನ್ನೂ ಪ್ರಜ್ವಲ್ ರೇವಣ್ಣ ಇದೀಗ ಜೈಲಿನಲ್ಲಿ ಯಾರೊಂದಿಗೆ ಹೆಚ್ಚು ಮಾತನಾಡದೇ ಮೌನವಾಗಿಯೇ ಕಾಲ ಕಳೆದಿದ್ದಾರೆ ಎನ್ನಲಾಗಿದೆ.
