Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಹುಲ್ ಗಾಂಧಿ ಅಪಪ್ರಚಾರಕ್ಕಾಗಿ ಬರುತ್ತಾರೆ: ವಿಜಯೇಂದ್ರ
  • Bangalore
  • Politics
  • State

ರಾಹುಲ್ ಗಾಂಧಿ ಅಪಪ್ರಚಾರಕ್ಕಾಗಿ ಬರುತ್ತಾರೆ: ವಿಜಯೇಂದ್ರ

admin August 4, 2025 1 minute read
WhatsApp Image 2025-08-04 at 12.35.11
Spread the love

ಬೆಂಗಳೂರು: ಮಹಾರಾಷ್ಟ್ರ ಮತ್ತಿತರ ರಾಜ್ಯಗಳಲ್ಲಿ ಚುನಾವಣಾ ಆಯೋಗದ ದುರ್ಬಳಕೆ ಆಗಿದೆ ಎಂದಿದ್ದಾರೆ. ಕರ್ನಾಟಕದಲ್ಲೂ ಮತ ಅಕ್ರಮ ಆಗಿದೆ ಎಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಹೇಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಮಾತನಾಡಿದ ಅವರು, ಬಿಹಾರ ವಿಧಾನಸಭಾ ಚುನಾವಣೆಯಂಲ್ಲಿ ಕಾಂಗ್ರೆಸ್ ಗೆಲ್ಲಲಸಾಧ್ಯ; ಎನ್‍ಡಿಎ ಅಲ್ಲಿ ಅಧಿಕಾರಕ್ಕೆ ಬರಲಿದೆ ಎಂಬುದು ಖಾತರಿ ಆದ ಬಳಿಕ ದೇಶದಲ್ಲಿ ಗೊಂದಲ ಸೃಷ್ಟಿಸುವ ಕೆಲಸವನ್ನು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ಅವರು ಆಕ್ಷೇಪಿಸಿದ್ದಾರೆ.

ಬೆಂಗಳೂರು ಕೇಂದ್ರ, ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಚುನಾವಣಾ ಆಯೋಗದ ದುರುಪಯೋಗ ಮಾಡಿಕೊಂಡಿದೆ ಎಂದು ಆರೋಪಿಸಿ, ಅಪಪ್ರಚಾರ ಮಾಡುತ್ತಿದ್ದಾರೆ. ಈ ಮೂಲಕ ದೇಶದಲ್ಲಿ ಗೊಂದಲ ಸೃಷ್ಟಿಸಲು ಕಾಂಗ್ರೆಸ್ ಹೊರಟಿದೆ ಎಂದು ದೂರಿದರು.

ಮಹಾರಾಷ್ಟ್ರ ಮತ್ತಿತರ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಪರಾಭವಗೊಂಡಿತ್ತು. ಬಳಿಕ ಕೇಂದ್ರದಲ್ಲಿ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕೆಂಬ ಹಪಾಹಪಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇತ್ತು. ಅದರಲ್ಲೂ ಅವರು ಯಶಸ್ಸು ಕಾಣಲು ಸಾಧ್ಯವಾಗಿಲ್ಲ ಎಂದು ವಿಶ್ಲೇಷಿಸಿದರು.

ರಾಹುಲ್ ಅಪಪ್ರಚಾರಕ್ಕೆ ಪ್ರತ್ಯುತ್ತರ: ಬಿಜೆಪಿ ಸಿದ್ಧ

ಕರ್ನಾಟಕ ಎಂದರೆ ರಾಹುಲ್ ಅವರಿಗೆ ವಿಶೇಷ ಪ್ರೀತಿ. ರಾಜ್ಯವನ್ನು ಕಾಂಗ್ರೆಸ್ ಪಕ್ಷದ ಎಟಿಎಂ ಆಗಿ ಪರಿವರ್ತಿಸಲಿದ್ದಾರೆ ಎಂದು ನಾವು ಚುನಾವಣೆ ವೇಳೆ ಹೇಳಿದ್ದೆವು. ಕಪ್ಪ ಕಾಣಿಕೆಗೆ ಕರ್ನಾಟಕವನ್ನು ದುರ್ಬಳಕೆ ಮಾಡಲಿದ್ದಾರೆ ಎಂದು ಹೇಳುತ್ತಿದ್ದೆವು. ಬೆಲೆ ಏರಿಕೆ ಮೂಲಕ ರಾಜ್ಯದ ಜನರ ಮೇಲೆ ಬರೆ ಎಳೆಯುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ವಿಜಯೇಂದ್ರ ಅವರು ಆರೋಪಿಸಿದರು.

ದೇಶದ್ರೋಹಿಗಳಿಗೆ ಕರ್ನಾಟಕ ಸ್ವರ್ಗವಾದರೆ, ರಾಹುಲ್ ಅವರಿಗೆ ಕರ್ನಾಟಕ ಎಂದರೆ ಬಹಳ ಪ್ರೀತಿ. ಇದು ಇಲ್ಲಿನ ಜನತೆಯ ಮೇಲಲ್ಲ; ದೆಹಲಿಗೆ ಎಲ್ಲ ರೀತಿ ವ್ಯವಸ್ಥೆ ತಲುಪುತ್ತಿದೆ ಎಂಬುದೇ ಇದಕ್ಕೆ ಕಾರಣ ಎಂದು ವಿವರಿಸಿದರು. ಅಪಪ್ರಚಾರಕ್ಕಾಗಿ ನಾಳೆ ಮತ್ತೆ ಬರುತ್ತಾರೆ. ಬಿಜೆಪಿ ಕೂಡ ಇದಕ್ಕೆ ಪ್ರತ್ಯುತ್ತರ ಕೊಡಲು ಸಜ್ಜಾಗಿದೆ ಎಂದರು. ಇದನ್ನೂ ಓದಿ: ಹರ್ ಘರ್ ತಿರಂಗ ಅಭಿಯಾನದ

ಕಾಂಗ್ರೆಸ್ ಪಕ್ಷದವರು ದೇಶದ್ರೋಹಿಗಳೆಂದರೆ ತಪ್ಪಾಗಲಾರದು. ಕೇವಲ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ಸಮಾಜದ ನಡುವೆ ವಿಷಬೀಜ ಬಿತ್ತುತ್ತಿದ್ದಾರೆ. ದೇಶ- ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿಸುವ ಕೆಲಸ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿದೆ ಎಂದು ಹೇಳಿದರು.

 

About the Author

admin

Administrator

Visit Website View All Posts

Spread the love

Post navigation

Previous: ಹರ್ ಘರ್ ತಿರಂಗ ಅಭಿಯಾನದ
Next: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಮುಂದೂಡಿಕೆ: ಡಿಕೆಶಿ

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.