ಬೆಂಗಳೂರು: ಇನ್ಮುಂದೆ ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆಯನ್ನು ನೀಡಲಿದೆ..
ಹೌದು, ಮುಸ್ಲಿಂ ಸಮುದಾಯದಲ್ಲಿ ಸಾಮೂಹಿಕ ವಿವಾಹವಾದರೆ ಸರ್ಕಾರದಿಂದ ಇನ್ಮುಂದೆ ಐವತ್ತು ಸಾವಿರ ನೀಡುತ್ತೇವೆ ಎಂದು ಸಚಿವ ಜಮೀರ್ ಅಹ್ಮದ್ ಅವರು ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು ಅದು ಆದೇಶ ಆಗಿದೆ. ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್ ಸೇರಿದಂತೆ ಪ್ರತಿಭಾನ್ವಿತರಿಗೆ ಸಹಾಯ ಮಾಡುತ್ತೇವೆ ಎಂದರು.
ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್ ಸೇರಿದಂತೆ ಪ್ರತಿಭಾನ್ವಿತರಿಗೆ ಸಹಾಯ ಮಾಡುತ್ತೇವೆ. ಇಲಾಖೆ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಧನ ಸಹಾಯ ಮಾಡುತ್ತಿದ್ದೇವೆ. ಇದನ್ನೂ ಓದಿ: ವಿಕ್ಟೋರಿಯಾ ಆಸ್ಪತ್ರೆಗೆ CM ಭೇಟಿ
214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್ ಟಾಪ್ ಕೊಡುತ್ತಿದ್ದೇನೆ. ಸಾಮೂಹಿಕ ವಿವಾಹ ಮಾಡವುದು ಬಡವರು, ಹೀಗಾಗಿ ಅಲ್ಪಸಂಖ್ಯಾತರಲ್ಲಿ ಸಾಮೂಹಿಕ ವಿವಾಹ ಮಾಡುವವರಿಗೂ ಸಹಾಯ ಮಾಡುತ್ತೇವೆ ಎಂದು ತಿಳಿಸಿ ಸಹಾಯ ಮಾಡುತ್ತೇವೆಂದು ಮಾಹಿತಿ ನೀಡಿದರು.
