ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಆಯೋಜಿಸಿದ್ದ “ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನವ”ನ್ನು ಉದ್ಘಾಟಿಸಿ, ಸ್ವಾತಂತ್ರ್ಯ ಸೇನಾನಿಗಳಿಗೆ ನಮಿಸಿದರು.
ಈ ಸಂದರ್ಭದಲ್ಲಿ ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಶ್ರೀ ವಚನಾನಂದ ಸ್ವಾಮಿಗಳು, ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
