ಬೆಂಗಳೂರು: ಹೈಕೋರ್ಟ್ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ನೆನಪಿಗಾಗಿ ನಿರ್ಮಿಸಲಾದ ಸ್ಮಾರಕವನ್ನು ನೆಲಸಮ ಮಾಡಲಾಗಿದೆ.
ಇನ್ನು ವಿಷ್ಣುವರ್ಧನ್ ಅವರ ಸ್ಮಾರಕವನ್ನು ನೆಲಸಮನಗೊಳಿಸಿರುವುದರಿಂದ ಕೆಲ ಅಭಿಮಾನಿಗಳು ಆಕ್ರೋಶ ಹೊರಹಾಕುವುದರ ಜೊತೆಗೆ ಕಣ್ಣೀರು ಕೂಡ ಹಾಕುತ್ತಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಅದೆಷ್ಟೋ ಒಳ್ಳೆ ಸಿನಿಮಾಗಳಲ್ಲಿ ನಟಿಸಿರುವ ನಟರಿಗೆ ಒಂದು ಸ್ಮಾರಕ ಕಟ್ಟಿರುವುದನ್ನು ನೆಲಸಮ ಮಾಡಿರುವುದು ಕಂಡನಿಯ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ನಿಯಮಾವಳಿ ಉಲ್ಲಂಘನೆ ಕನಕ ಆಗ್ರೋ ಎಜೇನ್ಸಿ ಪರವಾನಗಿ ಅಮಾನತು
ಬೆಂಗಳೂರು ಹೊರವಲಯದ ಕಂಗನಹಳ್ಳಿ ಬಳಿ ಇರುವ ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣು ಸ್ಮಾರಕ ನೆಲಸಮಗೊಂಡಿದೆ. ಬಾಲಣ್ಣ ಕುಟುಂಬ ಹಾಗೂ ವಿಷ್ಣುವರ್ಧನ್ ಅಭಿಮಾನಿಗಳ ನಡುವೆ ಈ ವಿಚಾರವಾಗಿ ಇತ್ತೀಚೆಗೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಕಳೆದ ಕೆಲ ವರ್ಷಗಳಿಂದ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೂ ಅವಕಾಶ ನೀಡಲಾಗುತ್ತಿರಲಿಲ್ಲ. ಈ ನಡುವೆ, ಈಗ ಸ್ಮಾರಕವನ್ನು ರಾತ್ರೋರಾತ್ರಿ ತೆರವುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
