ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 10 ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಸುಮಾರು 19 ಕಿಲೋಮೀಟರ್ ಉದ್ದದ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಕಾರ್ಯಕ್ರಮ ನೆರವೇರಲಿದ್ದು, ಈ ಕಾರ್ಯಕ್ರಮ ಆಗಸ್ಟ್ 10ರಂದು ಬೆಳಿಗ್ಗೆ 8.30 ರಿಂದ 12 ಗಂಟೆವರೆಗೆ ನೆರವೇರಲಿದೆ.
ಇನ್ನು ರಾಜ್ಯಕ್ಕೆ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಆಗಮಿಸುತ್ತಿರುವುದರಿಂದ ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಕೆಲವೆಡೆ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ. ಇದರಿಂದ ಕೆಲವು ಮುಖ್ಯ ರಸ್ತೆಗಳು ಕೂಡ ಬಂದಾಗ ತಿಳಿದುಬಂದಿದೆ. ಇದನ್ನೂ ಓದಿ: ಬಿಜೆಪಿಗರ ಕರಾಳ ಬಂಡವಾಳ ಬಯಲು: ಹೆಚ್ ಸಿ ಮಹದೇವಪ್ಪ
ಮಾರೇನಹಳ್ಳಿ ರಾಜಲಕ್ಷ್ಮೀ ಜಂಕ್ಷನ್ ನಿಂದ 18ನೇ ಮುಖ್ಯರಸ್ತೆ, ಈಸ್ಟ್ ಎಂಡ್ ಜಂಕ್ಷನ್ ನಿಂದ ಅರವಿಂದ ಜಂಕ್ಷನ್ ವರೆಗೆ ಹಾಗೂ ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಫ್ಲೈ ಓವರ್, ಹೊಸೂರು ಕಡೆಯಿಂದ ನಗರದ ಕಡೆಗೆ ಬರುವ ಮಾರ್ಗ, ಇನ್ಫೋಸಿಸ್ ಅವೆನ್ಯೂ, ವೇಲಾಂಕಣಿ ರಸ್ತೆಗಳಲ್ಲಿ ನಿರ್ಬಂಧ ವಿಧಿಸಲಾಗಿದೆ.
