ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವುದರ ಜೊತೆಗೆ ಆರ್ ವಿ ರಸ್ತೆಯಿಂದ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದರು.
ನರೇಂದ್ರ ಮೋದಿ ಅವರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೂಡ ಇದ್ದರು.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿರುವ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅವರು, ಆರ್ವಿ ರಸ್ತೆಯಿಂದ ಬೊಮ್ಮಸಂದ್ರವರೆಗೆ 19 ಕಿಮೀ ಉದ್ದದ ಈ ಹೊಸ ಮೆಟ್ರೋ ಮಾರ್ಗವು, ದಕ್ಷಿಣ ಬೆಂಗಳೂರು ಭಾಗದ ಸಂಪರ್ಕತೆಯನ್ನು ಹೆಚ್ಚಿಸಿ, ವಾಹನ ದಟ್ಟಣೆಯನ್ನು ತಗ್ಗಿಸಲು ಮಹತ್ತರ ನೆರವಾಗಲಿದೆ. ಇದನ್ನೂ ಓದಿ: ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸಿದ ನರೇಂದ್ರ ಮೋದಿ
ಹಳದಿ ಮಾರ್ಗ ಈಗ ಪರ್ಪಲ್ ಹಾಗೂ ಗ್ರೀನ್ ಲೈನ್ ಜಾಲಕ್ಕೆ ಸೇರ್ಪಡೆಯಾದ ಹಿನ್ನೆಲೆ, ನಮ್ಮ ಮೆಟ್ರೋ ದಿನನಿತ್ಯದ ಪ್ರಯಾಣಿಕರ ಸಂಖ್ಯೆ 12.5 ಲಕ್ಷಕ್ಕೆ ಏರಿಕೆಯಾಗಲಿದೆ ಇದು ನಮ್ಮ ನಗರದ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಹೆಜ್ಜೆ ಎಂದು ಬರೆದುಕೊಂಡಿದ್ದಾರೆ.
