Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮನೆ ಮನೆಯಲ್ಲೂ ತ್ರಿವರ್ಣ ಧ್ವಜ: ವಿಜಯೇಂದ್ರ
  • Bangalore
  • Politics
  • State

ಮನೆ ಮನೆಯಲ್ಲೂ ತ್ರಿವರ್ಣ ಧ್ವಜ: ವಿಜಯೇಂದ್ರ

admin August 13, 2025 1 minute read
WhatsApp Image 2025-08-13 at 12.50.36
Spread the love

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಬಂದರೆ ಸಾಕು ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ತ್ರಿವರ್ಣ ಧ್ವಜ ಹಾರಿಸಲಾಗುತ್ತಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿಯವರು ‘ಹರ್ ಘರ್ ತಿರಂಗ’ ಅಭಿಯಾನವನ್ನು ಕೈಗೊಂಡು ಈಗಾಗಲೇ ಪ್ರತಿ ಮನೆ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವಂತೆ ಮಾಡಿದ್ದಾರೆ.

ಅದರಂತೆ ಇಂದು (ಬುಧವಾರ ಆ. 13) ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹರ್ಘರ್ತಿರಂಗ ಅಭಿಯಾನವನ್ನು ಕೈಗೊಂಡಿದ್ದಾರೆ.

‘ಹರ್ ಘರ್ ತಿರಂಗ’ ಅಭಿಯಾನದಲ್ಲಿ ಮನೆ ಮನೆಗೆ ತ್ರಿವರ್ಣ ಧ್ವಜವನ್ನು ಹಂಚಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರ ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸಬೇಕು. ತ್ರಿವರ್ಣ ಧ್ವಜ ರಾರಾಜಿಸುವ ಮೂಲಕ ಪ್ರತಿಯೊಬ್ಬ ಭಾರತೀಯರಲ್ಲೂ ದೇಶದ ಬಗ್ಗೆ ಸದ್ಭಕ್ತಿ, ಶ್ರದ್ಧೆ ಬರಬೇಕೆಂಬ ಸದುದ್ದೇಶದಿಂದ ಬಿಜೆಪಿ, ರಾಜ್ಯದಲ್ಲೂ ಅಭಿಯಾನ ನಡೆಸುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸತ್ಯ ಸತ್ಯತೆ ಬಹಿರಂಗವಾಗಬೇಕು: ವಿಜಯೇಂದ್ರ

‘ಹರ್ ಘರ್ ತಿರಂಗ’ ಅಭಿಯಾನದ ಪ್ರಯುಕ್ತ ಗುಟ್ಟಹಳ್ಳಿಯ ಮಾರುತಿ ಬಡಾವಣೆಯಲ್ಲಿರುವ ಪಕ್ಷದ ಕಾರ್ಯಕರ್ತ ಲಕ್ಕಸ್ವಾಮಿ ಅವರ ಮನೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಎಲ್ಲ ಜಿಲ್ಲೆ, ಎಲ್ಲ ವಿಧಾನಸಭಾ ಕ್ಷೇತ್ರ, ಪ್ರತಿ ಗ್ರಾಮದಲ್ಲೂ ಕಾರ್ಯಕರ್ತರ ಮನೆಗೆ ಭೇಟಿ ಕೊಟ್ಟು, ಎಲ್ಲರ ಮನೆ ಮೇಲೆ ತ್ರಿವರ್ಣ ಧ್ವಜ ಹಾರಿಸಲಾಗುತ್ತಿದೆ. ಹರ್ ಘರ್ ತಿರಂಗ ಅಭಿಯಾನ ನಡೆಯುತ್ತಿದೆ ಎಂದು ವಿವರಿಸಿದರು.

‘ಹರ್ ಘರ್ ತಿರಂಗ’ ಸಂಬಂಧಿತ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಅಶ್ವತ್ಥನಾರಾಯಣ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಮಲ್ಲೇಶ್ವರ ಮಂಡಲ ಅಧ್ಯಕ್ಷ ಕೆ.ಎಸ್. ಕೇಶವ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಸತ್ಯ ಸತ್ಯತೆ ಬಹಿರಂಗವಾಗಬೇಕು: ವಿಜಯೇಂದ್ರ
Next: ಸ್ವಾತಂತ್ರ‍್ಯ ದಿನಾಚರಣೆಯ ಸಿದ್ಧತೆ ಕುರಿತು ಮಾಧ್ಯಮಗೋಷ್ಠಿ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.