ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಗ್ರೌಂಡ್ ನಲ್ಲಿ ಆಗಸ್ಟ್ 15, 2025 ರಂದು ನಡೆಯುವ “ರಾಜ್ಯ ಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆ”ಯ ಅಂಗವಾಗಿ ಕೈಗೊಂಡಿರುವ ಪೂರ್ವಭಾವಿ ಸಿದ್ಧತೆಗಳ ಕುರಿತು ನಡೆದ ಮಾಧ್ಯಮ ಗೋಷ್ಠಿನಡೆಯಿತು. ಇದನ್ನೂ ಓದಿ: ಮನೆ ಮನೆಯಲ್ಲೂ ತ್ರಿವರ್ಣ ಧ್ವಜ: ವಿಜಯೇಂದ್ರ
ಈ ಮಾಧ್ಯಮಗೋಷ್ಠಿಯ ಮಾನ್ಯ ಬಿಬಿಎಂಪಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಸೀಮಂತ್ ಕುಮಾರ್ ಸಿಂಗ್ ರವರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ಶ್ರೀ ಜಗದೀಶ್ ರವರು ವಿವರಣೆ ನೀಡಿದರು.
