Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿದೇಶದಲ್ಲಿ ಅಧ್ಯಯನಕ್ಕೆ ಸರ್ಕಾರದಿಂದ ವಿಶೇಷ ಕಾರ್ಯಕ್ರಮ
  • Bangalore
  • Front news
  • Politics
  • State

ವಿದೇಶದಲ್ಲಿ ಅಧ್ಯಯನಕ್ಕೆ ಸರ್ಕಾರದಿಂದ ವಿಶೇಷ ಕಾರ್ಯಕ್ರಮ

admin August 13, 2025 1 minute read
WhatsApp Image 2025-08-13 at 14.42.30
Spread the love

ಬೆಂಗಳೂರು: ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದಿಂದ ವಿದೇಶದಲ್ಲಿ ಅಧ್ಯಯನ ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.

ವಿದೇಶದಲ್ಲಿ ಅಧ್ಯಯನ ವಿಶೇಷ ಕಾರ್ಯಕ್ರಮವನ್ನು ಇದೇ ಆಗಸ್ಟ್ 17 ಭಾನುವಾರ ರಂದು  ಬೆಳಿಗ್ಗೆ 10:00 ಸಂಜೆ 5 ಗಂಟೆವರೆಗೆ ಬೆಂಗಳೂರಿನಲ್ಲಿರುವ ಲಲಿತ್ ಅಶೋಕ್ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ಸರ್ಕಾರವು ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ ಮೂಲಕ ಪ್ರಾರಂಭಿಸುತ್ತಿರುವ ಪ್ರಪ್ರಥಮ ಅಂತರಾಷ್ಟ್ರೀಯ ಶೈಕ್ಷಣಿಕ ಉಪಕ್ರಮವಾಗಿದೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ 10ಕ್ಕೂ ಹೆಚ್ಚು ದೇಶಗಳಿಂದ 50ಕ್ಕೂ ಹೆಚ್ಚು ವಿಶ್ವವಿದ್ಯಾನಿಲಯಗಳನ್ನು ಸಂಪರ್ಕಿಸುವ ಸುವರ್ಣ ಅವಕಾಶವನ್ನು ಕಲ್ಪಿಸುತ್ತಿದ್ದು, ಅರ್ಜಿಗಳ ಸಲ್ಲಿಕೆಯಿಂದ ದಾಖಲಾತಿಯವರೆಗಿನ ಎಲ್ಲಾ ಹಂತಗಳ ಬಗ್ಗೆ ಸಂಪೂರ್ಣ ಸಹಕಾರ ದೊರೆಯಲಿದೆ ಎಂದು ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ರವರು ಹೇಳಿದರು.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಸರಕಾರ ಕೌಶಲ್ಯಾಭಿವೃದ್ಧಿ ವತಿಯಿಂದ ಹೊಸ ಅಧ್ಯಯನವನ್ನು ಪ್ರಾರಂಭಿಸುತ್ತಿದ್ದೇವೆ. ಈ ಕುರಿತು ಈಗಾಗಲೇ ಬಜೆಟ್ ನಲ್ಲೂ ಕೂಡ ಇದರ ಬಗ್ಗೆ ಮಾಹಿತಿ ನೀಡಿದ್ದೇವೆ. 

ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹೊರದೇಶದಲ್ಲಿ ವಿದ್ಯಾಭ್ಯಾಸ ಪಡೆಯಲು ಬಯಸುತ್ತಾರೋ ಅಂತವರಿಗೆ ಇದೇ ಆಗಸ್ಟ್ 17ರಂದು ನಾವು ಒಂದು ಕಾನ್ಫರೆನ್ಸ್ ಮಾಡುತ್ತಿದ್ದೇವೆ. ಈ ಕಾರ್ಯಕ್ರಮಕ್ಕೆ ಈಗಾಗಲೇ 1124 ವಿದ್ಯಾರ್ಥಿಗಳು ನೊಂದಣಿ ಪಡೆದಿದ್ದಾರೆ. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ದೇಶದ ವಿಶ್ವವಿದ್ಯಾಲಯದವರು ಇದರಲ್ಲಿ ಭಾಗಿಯಾಗುತ್ತಿದ್ದಾರೆ.‌ ಇದನ್ನೂ ಓದಿ: ಮನೆ ಮನೆಯಲ್ಲೂ ತ್ರಿವರ್ಣ ಧ್ವಜ: ವಿಜಯೇಂದ್ರ

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬೇರೆ ದೇಶದ ವಿಶ್ವವಿದ್ಯಾಲಯದವರು ಜೊತೆ ಮುಖಾಮುಖಿಯಾಗಿ ತಮ್ಮ ಶಿಕ್ಷಣದ ಬಗ್ಗೆ ಚರ್ಚೆ ಮಾಡಬಹುದು ಎಂದರು. ಸರ್ಕಾರ ವಿದ್ಯಾರ್ಥಿಗಳಿಗೆ ಮಹತ್ವದ ವೇದಿಕೆಯನ್ನು ಮಾಡಿಕೊಟ್ಟಿದೆ. ವಿದೇಶಕ್ಕೆ ವಿದ್ಯಾಭ್ಯಾಸಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಕೊಡಲಾಗುವುದು. ಸುಮಾರು 8 ರಿಂದ 10 ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ಕೊಡಲಾಗುತ್ತದೆ.

ನಮ್ಮ ರಾಜ್ಯದ ವಿದ್ಯಾರ್ಥಿಗಳು ಬೇರೆ ಬೇರೆ ದೇಶಕ್ಕೆ ವಿದ್ಯಾಭ್ಯಾಸಕ್ಕೆ ಹೋಗುತ್ತಿರುವುದನ್ನು ಗಮನಿಸಿ ರಾಜ್ಯ ಸರ್ಕಾರ ಒಂದೊಳ್ಳೆ ಕೆಲಸ ಮಾಡಲು ಮುಂದಾಗಿದೆ. ಇದನ್ನು ವಿದೇಶಕ್ಕೆ ತೆರಳಿ ವಿದ್ಯಾಭ್ಯಾಸ ಪಡೆಯುವ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಶಿವ ಕಾಂತಮ್ಮ ನಾಯಕ್, ಯಮ್ಮಡಿ ನಾಗರಾಜ್ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಲಭ್ಯವಿರುವ ಸೌಲಭ್ಯಗಳು

  • ವೈಯಕ್ತಿಕ ಸಮಾಲೋಚನೆ

 

  • ವೀಸಾ ಬಗ್ಗೆ ಮಾಹಿತಿ, ಅರ್ಜಿ ಸಲ್ಲಿಕೆ ಮತ್ತು ಟ್ಯಾಕಿಂಗ್

 

  • ಅರ್ಜಿ ಸಲ್ಲಿಕೆ ಮತ್ತು ದಾಖಲಾತಿ ಬಗ್ಗೆ ವಿವರಣೆ

 

  • ಹಣಕಾಸು ವ್ಯವಸ್ಥೆ ಮತ್ತು ಆರೋಗ್ಯ ವಿಮೆ ಕುರಿತ ಮಾಹಿತಿ

 

  • ವಿದೇಶೀ ಭಾಷಾ ಪ್ರಾವೀಣ್ಯತೆಯ ಮೌಲ್ಯಮಾಪನ

 

 

 

 

 

About the Author

admin

Administrator

Visit Website View All Posts

Spread the love

Post navigation

Previous: ಸ್ವಾತಂತ್ರ‍್ಯ ದಿನಾಚರಣೆಯ ಸಿದ್ಧತೆ ಕುರಿತು ಮಾಧ್ಯಮಗೋಷ್ಠಿ
Next: ಗವಿಸಿದ್ದಪ್ಪ ಹತ್ಯೆ ಪ್ರಕರಣ ಎನ್‍ಐಎಗೆ ವಹಿಸಿ: ಬಿವೈವಿ

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.