ಶಹಾಪುರ: ಆ. 15 ರಂದು ನಡೆಯುವ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಯಂತಿಯ ಅಂಗವಾಗಿ ಸರ್ಕಾರಿ ಕಚೇರಿಗಳಲ್ಲಿ, ಶಾಲೆಗಳಲ್ಲಿ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಗೌರವ ಸಲ್ಲಿಸಲು ಆದೇಶ ನೀಡಬೇಕೆಂದು ಕುರುಬ ಸಮಾಜದ ತಾಲೂಕ ಅಧ್ಯಕ್ಷ ಯಲ್ಲಪ್ಪ ನರಿ ನೇತೃತ್ವದಲ್ಲಿ ತಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಬಳಿಕ ಮಾತನಾಡಿದ ತಹಸೀಲ್ದಾರರು, ಸರ್ಕಾರದಿಂದ ಆದೇಶ ಬಂದ ಕೂಡಲೇ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಆದೇಶ ಹೋರಡುಸುತ್ತೆವೆಂದು ಹೇಳಿದರು.
ಈ ಸಂದರ್ಭದಲ್ಲಿ ಕನಕ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಮಹಾಲಿಂಗರಾಯ ಮಂಡಗಳ್ಳಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಸಂಘದ ಅಧ್ಯಕ್ಷರಾದ ರಾಯಪ್ಪ ಚಲುವಾದಿ, ಪ್ರಧಾನ ಕಾರ್ಯದರ್ಶಿ ಮಹೇಶ್ ರಸ್ತಾಪುರ, ಸೀನು ನಾಶಿ, ಯುವ ಘಟಕದ ಪ್ರಧಾನ ಕಾರ್ಯದರ್ಶಿ ಬಲಭೀಮ ಮಡ್ನಳ, ಭೀಮಣ್ಣಗೌಡ ಹುಲಕಲ್, ಮರ್ದಾನಿ ಸಲಾದಪುರ, ಇತರರು ಇದ್ದರು.
