ದೆಹಲಿ: ನ್ಯಾಯಾಲಯದ ಮುಂದೆ ಯಾರು ದೊಡ್ಡವರಲ್ಲ ಯಾರು ಚಿಕ್ಕವರುಲ್ಲ. ನ್ಯಾಯಾಲಯದ ಮುಂದೆ ಎಲ್ಲರೂ ಸಮಾನರು. ಅದಕ್ಕೆ ಉದಾಹರಣೆ ಎಂಬಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗೂ ಪವಿತ್ರೇಗೌಡ ಸೇರಿದಂತೆ ಏಳು ಜನ ಆರೋಪಿಗಳಿಗೆ ಮತ್ತೆ ಜೈಲೇ ಗತಿ ಎಂಬಂತಾಗಿದೆ.
ಹೌದು, ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ರದ್ದು ಕೋರಿದೆ ಇದರಿಂದ ದರ್ಶನಗೆ ಮತ್ತೆ ಜೈಲೂಟನೇ ಗತಿಯಾಗಿದೆ. ಇದನ್ನೂ ಓದಿ: ಡಿ ಗ್ಯಾಂಗ್ ಭವಿಷ್ಯಕ್ಕೆ ಕೌಂಟ್ಡೌನ್ ಶುರು!
ಹೈಕೋರ್ಟ್ ಆದೇಶಗಳ ಲೋಪ ಎತ್ತಿ ತೋರಿಸಿದ ಸುಪ್ರೀಂ ಕೋರ್ಟ್. ಆರೋಪಿ ಎಷ್ಟೇ ದೊಡ್ಡವರಿದ್ದರು ಕೂಡ ಅವರು ಕಾನೂನು ಮುಂದೆ ಯಾರು ದೊಡ್ಡವರಲ್ಲ ಯಾರು ಚಿಕ್ಕವರಲ್ಲ. ಆರೋಪಿಗಳಿಗೆ ಫೈವ್ ಸ್ಟಾರ್ ಟ್ರೀಟ್ಮೆಂಟ್ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೈ ಕೋರ್ಟ್ ವಿರುದ್ದ ಗರಂ ಆಗಿದೆ. ಅಲ್ಲದೆ ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಿತ್ತು. ಇದು ಲ್ಯಾಂಡ್ ಮಾರ್ಕ್ ತೀರ್ಪು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
