ಬೆಂಗಳೂರು: ಬಿಬಿಎಂಪಿ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ವೇತನ ಗೊಂದಲವನ್ನು ಅಧಿಕಾರಿಗಳ ಜತೆ ಚರ್ಚಿಸಿ, ಬಗೆಹರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದರು.
ಸದಾಶಿವನಗರದ ನಿವಾಸದ ಬಳಿ ಶನಿವಾರ ಆಗಮಿಸಿದ್ದ ಬಿಬಿಎಂಪಿ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಆರೋಗ್ಯ ಕಾರ್ಯಕರ್ತೆಯರ ವೇತನ ಪಾವತಿ ಜವಾಬ್ದಾರಿ ಕುರಿತು ಚರ್ಚಿಸಲು ನಿಮ್ಮಲ್ಲಿ ಐದು ಜನರ ನಿಯೋಗದೊಂದಿಗೆ ಇನ್ನೊಮ್ಮೆ ನನ್ನನ್ನು ಭೇಟಿ ಮಾಡಿ. ನಿಮ್ಮ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಬಗೆಹರಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಧರ್ಮಸ್ಥಳ ವಿಚಾರ ರಾಜಕೀಯ ವಸ್ತುವಲ್ಲ: ಡಿ.ಕೆ. ಸುರೇಶ್
ಬಿಬಿಎಂಪಿ ಗುತ್ತಿಗೆದಾರರಿಂದ ನಿಮಗೆ ವೇತನ ಪಾವತಿ ಆಗುವುದಿಲ್ಲ. ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯನ್ನು (ಬಿಎಸ್ಡಬ್ಲ್ಯೂಎಂಎನ್) ಬೆಂಗಳೂರು ನಗರದ ಕಸ ನಿರ್ವಹಣೆಗೆಂದು ಸ್ಥಾಪಿಸಲಾಗಿದೆ. ಇದನ್ನು ಗುತ್ತಿಗೆದಾರರು ನಿರ್ವಹಣೆ ಮಾಡುವುದಿಲ್ಲ. ಇದರ ಮುಖ್ಯಸ್ಥರಾಗಿ ಐಎಎಸ್ ಅಧಿಕಾರಿಯೇ ಇರುತ್ತಾರೆ ಎಂದು ಹೇಳಿದರು.
