ಬೆಂಗಳೂರು: ಕೆ ಆರ್ ಪುರ ಕಡೆಯಿಂದ ಮೇಖ್ರಿ ವೃತ್ತದ ಕಡೆ ವಾಹನಗಳ ಸರಾಗ ಸಂಚಾರಕ್ಕೆ ಅನುವಾಗುವಂತೆ ಹೆಬ್ಬಾಳ ಜಂಕ್ಷನ್ ನಲ್ಲಿ ಬಿಡಿಎ ನಿರ್ಮಿಸಿರುವ ಮೇಲ್ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಅವರು ಟೇಪ್ ಕಟ್ ಮಾಡಿ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಕಾಲೇಜು ದಿನಗಳ ಎಜ್ಡಿ ಬೈಕ್ ಚಾಲನೆಗೆ ಹಸಿರು ಬಾವುಟ ತೋರಿಸುವ ಮೂಲಕ ಇಂದು (ಸೋಮವಾರ ಆ. 18) ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಬಿ.ಡಿ.ಎ ಅಧ್ಯಕ್ಷ, ಶಾಸಕ ಎನ್ ಎ ಹ್ಯಾರಿಸ್, ಮಾಜಿ ಸಂಸದೆ, ನಟಿ ರಮ್ಯಾ, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಬಿ.ಡಿ.ಎ. ಕಮಿಷನರ್ ಮಣಿವಣ್ಣನ್, ಬಿಬಿಎಂಪಿ ಮುಖ್ಯ ಆಯುಕ್ತ ಡಾ ಮಹೇಶ್ವರರಾವ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ವರುಣಾರ್ಭಟಕ್ಕೆ ಕೆಆರ್ಎಸ್ ಡ್ಯಾಂನ ಒಳ ಹರಿವು ಹೆಚ್ಚಳ
