Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಎಲ್ಲ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯನವರೇ ಕಾರಣಕರ್ತರು: ವಿಜಯೇಂದ್ರ
  • Politics
  • State

ಎಲ್ಲ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯನವರೇ ಕಾರಣಕರ್ತರು: ವಿಜಯೇಂದ್ರ

admin August 19, 2025 1 minute read
WhatsApp Image 2025-08-19 at 17.16.19
Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ವಿಚಾರದಲ್ಲಿ ದೃಢ ನಿರ್ಧಾರ ತೆಗೆದುಕೊಳ್ಳಬೇಕು. ಎಸ್‌ಸಿ ಸಮುದಾಯದ 101 ಜಾತಿಗಳಿದ್ದು, ಯಾವುದೇ ಜಾತಿಗೆ ಅನ್ಯಾಯ ಆಗದಂತೆ ನಿರ್ಣಯ ತೆಗೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು (ಮಂಗಳವಾರ ಆಗಸ್ಟ್ 19) ರಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಸ್‌ಸಿ (SC) ಸಮುದಾಯದ 101 ಜಾತಿಗಳಿದ್ದು, ಒಳ ಮೀಸಲಾತಿ ಜಾರಿ ಮಾಡುವಾಗ ಯಾವುದೇ ಜಾತಿಗೆ ಅನ್ಯಾಯ ಆಗದಂತೆ ನಿರ್ಣಯ ತೆಗೆದುಕೊಳ್ಳಿ ಎಂದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್; ಸದನದಲ್ಲಿ ಇಂದು ಗೃಹ ಸಚಿವರ ಉತ್ತರ ಏನಿರಲಿದೆ?

ನೀವು ತೆಗೆದುಕೊಳ್ಳುವ ತೀರ್ಮಾನದಿಂದ ನಾಳೆ ಇತರ ಎಲ್ಲ ವಿಷಯಗಳನ್ನೂ ವಿಮರ್ಶಿಸಿ, ಸಮರ್ಪಕ ತೀರ್ಮಾನವನ್ನು ರಾಜ್ಯದ ಮುಖ್ಯಮಂತ್ರಿಗಳು ತೆಗೆದುಕೊಳ್ಳಬೇಕು ಎಂದು ವಿನಂತಿಸಿದರು. ಎಲ್ಲ ಗೊಂದಲಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕಾರಣಕರ್ತರು. ಗೊಂದಲಗಳು, ಸಮಸ್ಯೆಗೆ ಇತಿಶ್ರೀ ಹಾಡುವ ಕರ್ತವ್ಯ ಈ ರಾಜ್ಯದ ಮುಖ್ಯಮಂತ್ರಿಗಳಿಗೆ ಇದೆ. ಅದನ್ನು ಸರಿಯಾದ ರೀತಿಯಲ್ಲಿ ನಿಭಾಯಿಸುತ್ತಾರೆ ಎಂಬ ಅಪೇಕ್ಷೆಯಲ್ಲಿ ನಮ್ಮ ಎಸ್‌ಸಿ ಸಮುದಾಯ ಇದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದ ಒಳ ಮೀಸಲಾತಿ ವಿಷಯದಲ್ಲಿ ಯಾವುದೇ ಒಂದು ತೀರ್ಮಾನ ತೆಗೆದುಕೊಳ್ಳಲು ಆಗಿಲ್ಲ. ಸರ್ಕಾರವು ಗೊಂದಲದಲ್ಲಿ ಇರುವುದನ್ನು ನಾವು ನೋಡಿದ್ದೇವೆ ಎಂದು ಟೀಕಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ಸಾಮಾನ್ಯ ಜನರಂತೆ ಜೈಲಿನಲ್ಲಿ ಕಾಲ ಕಳೆಯುತ್ತಿರುವ ನಟ ದರ್ಶನ್
Next: ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಿದ ಸುದೀಪ್!

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.