ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಇಂದು (ಬುಧವಾರ ಆ. 20) ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಧೀಮಂತ ನಾಯಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಇದನ್ನೂ ಓದಿ: ಪರಿಶಿಷ್ಟ ಜಾತಿ ಸಮುದಾಯದವರಿಗೆ ಸರ್ಕಾರದಿಂದ ಸಿಹಿ ಸುದ್ದಿ!
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ, ವಿಧಾನ ಪರಿಷತ್ ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿ ಖಾನ್, ಉಪಾಧ್ಯಕ್ಷರಾದ ಶ್ರೀನಿವಾಸ್, ಮಾಜಿ ಎಂಎಲ್ ಸಿ ನಾರಾಯಣಸ್ವಾಮಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧುಕೋಕಿಲ, ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
