Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಧರ್ಮದ ಉಳಿವಿಗಾಗಿ ಧರ್ಮಯುದ್ಧ: ಬಿವೈವಿ
  • Bangalore
  • Politics
  • State

ಧರ್ಮದ ಉಳಿವಿಗಾಗಿ ಧರ್ಮಯುದ್ಧ: ಬಿವೈವಿ

admin August 21, 2025 1 minute read
WhatsApp Image 2025-08-21 at 16.19.07
Spread the love

ಬೆಂಗಳೂರು: ಕರ್ನಾಟಕದ ಪವಿತ್ರ ಹಿಂದೂ ದೇವಾಲಯಗಳಲ್ಲಿ ಒಂದಾದ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಕಳೆದ ಕೆಲವು ದಿನಗಳಿಂದ ಅಪಪ್ರಚಾರ ಮಾಡಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸೌಜನ್ಯ ಕೇಸ್ ಗೆ ಸಂಬಂಧಿಸಿದಂತೆ ಹಾಗೂ ಶವಗಳ ಹೂತಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತಂಡ ತನಿಕೆಯನ್ನು ಕೂಡ ನಡೆಸಿದ್ದು, ಇದರಲ್ಲಿ ಯಾವುದೇ ರೀತಿ ಶವಗಳು ಹಾಗೂ ಶವದ ಬುರುಡೆಗಳು ಸಿಗದಿದ್ದ ಕಾರಣಕ್ಕೆ ತನಿಕೆಯನ್ನು ನಿಲ್ಲಿಸಲಾಗಿದೆ.

ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಇಂದು (ಗುರುವಾರ ಆಗಸ್ಟ್ 21) ರಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆಗುತ್ತಿದೆ. ಧರ್ಮದ ಉಳಿವಿಗಾಗಿ ಧರ್ಮಯುದ್ಧ ನಡೆಯಲಿದೆ ಎಂದು ಹೇಳಿದ್ದಾರೆ.

3 ಹಂತಗಳಲ್ಲಿ ಹೋರಾಟ ನಡೆಯಲಿದ್ದು, ನಾಳೆಯಿಂದಲೇ ಹೋರಾಟ ಆರಂಭವಾಗಲಿದೆ ಎಂದರು. ಕಳೆದ 1 ತಿಂಗಳಿಂದ ಧರ್ಮಸ್ಥಳ ವಿಚಾರದಲ್ಲಿ ಏನೆಲ್ಲಾ ಬೆಳವಣಿಗೆ ಆಗಿದೆ ಗೊತ್ತಿದೆ. ಬಿಜೆಪಿ ನಿಲುವು ಸ್ಪಷ್ಟವಾಗಿದೆ. ಧರ್ಮಸ್ಥಳ ವಿಚಾರದಲ್ಲಿ SIT ತನಿಖೆಗೆ ನೇಮಿಸಿದಾಗ ಪಾರದರ್ಶಕವಾಗಿ ತನಿಖೆ ನಡೆಯಲಿ ಅಂತಾ ಬಿಜೆಪಿ ಸ್ವಾಗತ ಮಾಡಿತ್ತು. ಇಂದೂ ಕೂಡ ಹಿಂದೆ ಸರಿದಿಲ್ಲ. ನಿರಂತರ ಅಪಪ್ರಚಾರ ನಡೆಯುತ್ತಿದೆ. ಇದನ್ನೂ ಓದಿ: ಕನ್ನಡ ನಾಡು ಕಂಡ ಧೀಮಂತ ನಾಯಕ ಅರಸು

ದಕ್ಷಿಣ ಕನ್ನಡದಲ್ಲಿ ಪೂವಪ್ಪ ಅನ್ನೋ 81 ವರ್ಷದ ಹಿರಿಯರ ಮನೆಗೆ ರಾತ್ರಿ 1 ಗಂಟೆಗೆ ಹೋಗಿ ಫೋಟೋ ತೆಗೀತಾರೆ. ಹಿಂದೂಪರ ಸಂಘಟನೆಯ ಕಾರ್ಯಕರ್ತರು ಏನಾದ್ರೂ ಪೋಸ್ಟ್ ಮಾಡಿದ್ರೆ ಸುಮೋಟೋ ಹಾಕಿ ಕೇಸ್ ಹಾಕ್ತಾರೆ. ಆದರೆ ಧರ್ಮಸ್ಥಳ ವಿಚಾರದಲ್ಲಿ ತಡೆಯುವ ಕೆಲಸ ಆಗಿಲ್ಲ, ಕೇಸ್ ಕೂಡ ಹಾಕಿಲ್ಲ. ಅಪಪ್ರಚಾರ ತಡೆಯಬೇಕು ಅನ್ನೋ ಇಚ್ಚಾಶಕ್ತಿ ಸರ್ಕಾರಕ್ಕೆ ಇದ್ದಂತಿಲ್ಲ. ರಾಜ್ಯ ಸರ್ಕಾರದ ನಡವಳಿಕೆ ಕೂಡ ನಮಗೆ ಅನುಮಾನ ಕಾಡ್ತಿದೆ ಎಂದಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಕನ್ನಡ ನಾಡು ಕಂಡ ಧೀಮಂತ ನಾಯಕ ಅರಸು
Next: ಗಣೇಶ ಹಬ್ಬಕ್ಕೆ ಬಿಬಿಎಂಪಿಯಿಂದ ಮಾರ್ಗಸೂಚಿ ಬಿಡುಗಡೆ

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.