Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಗಣೇಶ ಹಬ್ಬಕ್ಕೆ ಬಿಬಿಎಂಪಿಯಿಂದ ಮಾರ್ಗಸೂಚಿ ಬಿಡುಗಡೆ
  • Bangalore
  • State

ಗಣೇಶ ಹಬ್ಬಕ್ಕೆ ಬಿಬಿಎಂಪಿಯಿಂದ ಮಾರ್ಗಸೂಚಿ ಬಿಡುಗಡೆ

admin August 21, 2025 1 minute read
WhatsApp Image 2025-08-21 at 16.42.08
Spread the love

ಬೆಂಗಳೂರು: ಗಣೇಶ ಹಬ್ಬಕ್ಕೆ ದಿನಗಡನೆ ಪ್ರಾರಂಭವಾಗಿದ್ದು, ರಾಜ್ಯದ ರಾಜಧಾನಿ ಬೆಂಗಳೂರು ನಗರವು ಈ ಬಾರಿ ಗಣೇಶನ ಆಗಮಕ್ಕೆ ಭರ್ಜರಿ ಸಿದ್ಧತೆಯನ್ನು ಮಾಡಿಕೊಂಡಿದೆ. ಈ ಬಾರಿ ಗಣೇಶ ಹಬ್ಬದಲ್ಲಿ ಕೆಲವು ನಿಯಮಗಳನ್ನು ಪಾಲಿಸಬೇಕೆಂದು ಬಿಬಿಎಂಪಿಯು ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ.

ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಗಣೇಶ ಚತುರ್ಥಿ ಕುರಿತು ನಿನ್ನೆ (ಬುಧವಾರ ಆ. 20) ಮಹತ್ವದ ಸಭೆ ನಡೆಯಿತು. ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾರ್ಗಸೂಚಿ ಹೊರಡಿಸಿದೆ. ಇದನ್ನೂ ಓದಿ: ಧರ್ಮದ ಉಳಿವಿಗಾಗಿ ಧರ್ಮಯುದ್ಧ: ಬಿವೈವಿ

 

1.ಗಣೇಶ ಹಬ್ಬದ ನಿಮಿತ್ತ ಸಾರ್ವಜನಿಕವಾಗಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲು ಉಪವಿಭಾಗ ಮಟ್ಟದಲ್ಲಿ ನೋಡಲ್ ಅಧಿಕಾರಿಗಳಾಗಿ ನೇಮಿಸಲಾದ ಸಹಾಯಕ ಕಾರ್ಯಪಾಲಕ ಅಭಿಯಂತರರುಗಳ ಕಾರ್ಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

 

2.ನೋಡಲ್ ಅಧಿಕಾರಿಗಳು ಪೊಲೀಸ್, ಬೆಸ್ಕಾಂ, ಅಗ್ನಿಶಾಮಕ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಭಿಪ್ರಾಯ ಪಡೆದು ಏಕಗವಾಕ್ಷಿಯಲ್ಲಿ ತ್ವರಿತವಾಗಿ ಅನುಮತಿ ನೀಡಲು ಕ್ರಮಕೈಗೊಳ್ಳಬೇಕು.

 

3.ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಯ ತಯಾರಿಕೆಯನ್ನು ಸಂಪೂರ್ಣವಾಗಿ ನಿಷೇಧಗೊಳಿಸಬೇಕು.

 

4.ಸದರಿ ವಸ್ತುಗಳನ್ನು ಬಳಸಿ ತಯಾರಿಸುವ, ಮಾರಾಟ ಮಾಡುವ ಪ್ರದೇಶಗಳನ್ನು ಸಂಬಂಧಪಟ್ಟ ಬಿಬಿಎಂಪಿಯ ಉಪವಿಭಾಗದ ನೋಡಲ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳು ಈ ಬಗ್ಗೆ ಖುದ್ದಾಗಿ ಪರಿಶೀಲಿಸಿ ನೋಟಿಸ್ ನೀಡಬೇಕು.

 

5.ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿ ತಯಾರಿಸುತ್ತಿದ್ದಲ್ಲಿ ಹಾಗೂ ಮಾರಾಟ ಮಾಡುತ್ತಿದ್ದಲ್ಲಿ ದಂಡ ವಿಧಿಸಿ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಿ, ನಿಷೇಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲು ಕ್ರಮವಹಿಸಬೇಕು.

 

6.ವಲಯ ಆಯುಕ್ತರು, ವಲಯ ಮಟ್ಟದಲ್ಲಿ ಮೇಲ್ವಿಚಾರಣೆ ನಡೆಸಬೇಕು. ವಶಪಡಿಸಿಕೊಳ್ಳಲಾದ ಮೇಲ್ಕಂಡ ವಸ್ತುಗಳನ್ನು ನಿಯಮಾನುಸಾರ ವಿಲೇವಾರಿಗೊಳಿಸಲು ಕ್ರಮವಹಿಸಬೇಕು.

 

7.ಗಣೇಶಮೂರ್ತಿ ತಯಾರಿಕೆದಾರರಿಗೆ ಪರಿಸರ ಸ್ನೇಹಿ/ಮಣ್ಣಿನಿಂದ ಮಾಡಿದ ಮೂರ್ತಿಗಳನ್ನು ಮಾತ್ರ ತಯಾರಿಸಲು ಜಾಹೀರಾತು ನೀಡುಬೇಕು.

 

8.ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ತಮ್ಮ ಮನೆಗಳಲ್ಲಿ, ಬಕೇಟ್‌ಗಳಲ್ಲಿ ವಿಸರ್ಜನೆಗೊಳಿಸಿ, ಬರುವ ಮಣ್ಣನ್ನು ಕೈತೋಟಗಳಿಗೆ, ಹೂವಿನ ಕುಂಡಗಳಿಗೆ ಬಳಸಲು ಅರಿವು ಮೂಡಿಸಬೇಕು.

 

9.ದೊಡ್ಡ ಗಾತ್ರದ ಮೂರ್ತಿಗಳ ವಿಸರ್ಜನೆಗೆ ಬಿಬಿಎಂಪಿ ವ್ಯಾಪ್ತಿಯ ವಾರ್ಡ್ಗಳಲ್ಲಿ ವಿಸರ್ಜನೆ/ನಿಮಜ್ಜನ ಸ್ಥಳಗಳನ್ನು ಗುರುತಿಸಿ, ಸದರಿ ಸ್ಥಳಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಪ್ರಚುರಪಡಿಸಬೇಕು.

 

10.ವಾರ್ಡ್ ವ್ಯಾಪ್ತಿಯಲ್ಲಿ ಸಂಚಾರಿ ವಾಹನ ಮೂಲಕ ವಿಸರ್ಜನೆಗೆ ಅಗತ್ಯ ವ್ಯವಸ್ಥೆ ಕೈಗೊಳ್ಳಬೇಕು.

 

11.ಪಾಲಿಕೆಯ ವ್ಯಾಪ್ತಿಯ ಕೆರೆ/ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆಯಿಂದ ಉಂಟಾಗುವ ಮಾಲಿನ್ಯವನ್ನು ತಡೆಗಟ್ಟಲು ಸದರಿ ಸ್ಥಳಗಳ ಸಮೀಪದಲ್ಲಿ ತಾತ್ಕಾಲಿಕ ವಿಸರ್ಜನೆ ಸ್ಥಳಗಳನ್ನು ನಿರ್ಮಿಸಬೇಕು. ಸದರಿ ವಿಸರ್ಜನೆಯಿಂದ ಬರುವ ಮಣ್ಣು, ಪೂಜಾ ಹೂಗಳು ಹಾಗೂ ಪ್ಲಾಸ್ಟಿಕ್ ಇತ್ಯಾದಿ ವಸ್ತುಗಳನ್ನು ವಿಂಗಡಿಸಬೇಕು. ಹಸಿತ್ಯಾಜ್ಯವನ್ನು ಹಸಿತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ, ಒಣತ್ಯಾಜ್ಯವನ್ನು ಒಣತ್ಯಾಜ್ಯ ಸಂಗ್ರಹಣಾ ಕೇಂದ್ರಗಳಿಗೆ ರವಾನಿಸಬೇಕು. ವಿಸರ್ಜನಾ ಸ್ಥಳಗಳಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಮೂರ್ತಿಗಳನ್ನು ವಿಸರ್ಜಿಸಲು ಪ್ರತ್ಯೇಕ ತಂಡಗಳನ್ನು ನೇಮಿಸಬೇಕು ಹಾಗೂ ಕಿಯಾಸ್, ಆಂಬ್ಯುಲೆನ್ಸ್ ವ್ಯವಸ್ಥೆ, ವೈದ್ಯರು ಮತ್ತು ಶುಶ್ರೂಷಕಿಯರನ್ನು ಪ್ರಾಥಮಿಕ ಚಿಕಿತ್ಸೆ ನೀಡಲು ನೇಮಿಸಿ, ಎಲ್ಲಾ ಪಿಹೆಚ್‌ಸಿಗಳ ಬಳಿಯಲ್ಲಿ ಹೆಚ್ಚುವರಿ ಆಂಬ್ಯುಲೆನ್ಸ್ ಹಾಗೂ ವೈದ್ಯರು ಸಿದ್ಧವಿರುವಂತೆ ಕ್ರಮವಹಿಸಬೇಕು. ಬೆಳಕಿನ ವ್ಯವಸ್ಥೆ, ಬ್ಯಾರಿಕೇಡ್ ನಿರ್ಮಾಣ, ಧ್ವನಿವರ್ಧಕ ವ್ಯವಸ್ಥೆ ಮತ್ತು ನುರಿತ ಈಜುಗಾರರನ್ನು ಒಳಗೊಂಡಂತೆ ಎನ್‌ಡಿಆರ್‌ಎಫ್ ತಂಡ ಸ್ಥಳದಲ್ಲಿ ಹಾಜರಿರುವಂತೆ ಕ್ರಮವಹಿಸಬೇಕು.

 

12.ಪರಿಸರ ಸ್ನೇಹಿ ಗಣೇಶ ಆಚರಣೆಯ ನಿಮಿತ್ತ ವಲಯ ಆಯುಕ್ತರು ವಲಯಕ್ಕೆ ಒಬ್ಬರನ್ನು ಮೇಲುಸ್ತುವಾರಿ ಅಧಿಕಾರಿಯನ್ನಾಗಿ ನೇಮಿಸಿ, ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ವಾರ್ಡಿಗೆ ಒಬ್ಬರಂತೆ ನೋಡಲ್ ಅಧಿಕಾರಿಯನ್ನು ನೇಮಿಸಲು ಅಗತ್ಯ ಕ್ರಮವಹಿಸಬೇಕು.

 

13.ಪ್ಲಾಸ್ಟಿಕ್ ನಿಷೇಧ ಆದೇಶ ಜಾರಿಯಲ್ಲಿದ್ದು, ವಲಯ ವ್ಯಾಪ್ತಿಯಲ್ಲಿ ತಂಡಗಳನ್ನು ರಚಿಸಿ ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆ ಕಂಡುಬಂದಲ್ಲಿ ನಿಯಮಾನುಸಾರ ದಂಡ ವಿಧಿಸಿ ಕ್ರಮಕೈಗೊಳ್ಳಬೇಕು.

 

About the Author

admin

Administrator

Visit Website View All Posts

Spread the love

Post navigation

Previous: ಧರ್ಮದ ಉಳಿವಿಗಾಗಿ ಧರ್ಮಯುದ್ಧ: ಬಿವೈವಿ
Next: ಯೂಟ್ಯೂಬರ್ ಸಮೀರ್ ಗೆ ಬಂಧನದ ಭೀತಿ

Views:

10

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.