ಬೆಂಗಳೂರು: ಯೂಟ್ಯೂಬರ್ ಸಮೀರ್ ಎನ್ನುವ ಯುವಕ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂಬ ಕಾರಣಕ್ಕೆ ಹಿಂದೂ ಸಂಘಟನೆಗಳು ಸಮೀರ್ ಎನ್ನುವ ಯುವಕನ ಮೇಲೆ ದೂರು ದಾಖಲಿಸಿದ್ದಾರೆ. ಹಿಂದೂ ಸಂಘಟನೆಗಳು ದೂರು ನೀಡಿರುವುದರಿಂದ ಪರಿಗಣಿಸಿ ಇದೀಗ ಸಮೀರ್ ಅವರನ್ನು ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆಯಲು ಶೋಧ ನಡೆಸಿದ್ದಾರೆ.
ಯೂಟ್ಯೂಬರ್ ಸಮೀರ್ ಬನ್ನೇರುಘಟ್ಟದಲ್ಲಿ ಬಾಡಿಗೆ ಮನೆಗೆಯಲ್ಲಿ ವಾಸವಾಗಿದ್ದರು. ಆದರೆ ಪೊಲೀಸರು ಆಗಮಿಸಿದ್ದ ಬನ್ನೇರುಘಟ್ಟ ಬಾಡಿಗೆ ಮನೆಯಲ್ಲಿ ಸಮೀರ್ ಇರದಿದ್ದ ಕಾರಣಕ್ಕೆ ಪೊಲೀಸ್ ಅಧಿಕಾರಿಗಳು ನಿಖರ ಮಾಹಿತಿ ಆಧರಿಸಿ ಕಾರ್ಯಚರಣೆಯನ್ನು ಮುಂದುವರಿಸಿದ್ದಾರೆ. ಇದನ್ನೂ ಓದಿ: ಗಣೇಶ ಹಬ್ಬಕ್ಕೆ ಬಿಬಿಎಂಪಿಯಿಂದ ಮಾರ್ಗಸೂಚಿ ಬಿಡುಗಡೆ
ಈ ನಡುವೆ ಸಮೀರ್ ಪ್ರಸ್ತುತ ನಾಪತ್ತೆಯಾಗಿದ್ದು, ಪೊಲೀಸರು ಆತನ ಪತ್ತೆಗೆ ಬಲೆ ಬೀಸಿದ್ದಾರೆ. ಈಗಾಗಲೇ 3 ಬಾರಿ ನೋಟಿಸ್ ನೀಡಿದರೂ ಪ್ರತಿಕ್ರಿಯಿಸದ ಕಾರಣ, ವಾರೆಂಟ್ ಪಡೆದು ಬಂಧನಕ್ಕೆ ಮುಂದಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
