ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತಗಳು ಇದೆ ಎಂದು ಈಗಾಗಲೇ ಅದೆಷ್ಟೋ ಉದಾಹರಣೆಗಳು ಬೆಳಕಿಗೆ ಬರುತ್ತದೆ.
ಹೌದು, ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತಗಳು ಇದೆ ಎಂದು ವಿರೋಧ ಪಕ್ಷದ ನಾಯಕರು ಹೇಳುತ್ತಿರುವ ಬೆನ್ನಲ್ಲೇ ಮತ್ತೆ ಇದೀಗ ಸಚಿವ ಈಶ್ವರ್ ಖಂಡ್ರೆ ಅವರ ವಿರುದ್ಧ ಸಿಎಂ ಹಾಗೂ ಡಿಸಿಎಂ ಗೆ ದೂರು ನೀಡಿದ್ದಾರೆ.
ಬಿಜೆಪಿ ನಾಯಕರೊಂದಿಗೆ ಕೈ ಜೋಡಿಸುತ್ತಿದ್ದಾರೆ ಎಂದು ಆರೋಪಿಸಿ ಸಚಿವ ಈಶ್ವರ್ ಖಂಡ್ರೆ ವಿರುದ್ಧ ಬೀದರ್ ಜಿಲ್ಲಾ ಕಾಂಗ್ರೆಸ್ ನಾಯಕರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಮೈಸೂರು ದಸರಾದಲ್ಲಿ ಏರ್ ಶೋಗೆ ಅನುಮತಿ
ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹಾಗೂ ಜಿಲ್ಲಾಧ್ಯಕ್ಷ ಇಬ್ಬರನ್ನು ಬದಲಿಸಿ ಎಂದು ಮಾಜಿ ಸಚಿವ ರಾಜಶೇಖರ ಪಾಟೀಲ್ ಹುಮ್ನಾಬಾದ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರು ದೂರು ಸಲ್ಲಿಸಿದ್ದಾರೆ.
