ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರ ಮದುವೆ ಬಗ್ಗೆ ಹರಿದಾಡುತ್ತಿರುವ ವದಂತಿಗಇದೀಗ ಸ್ಪಷ್ಟನೆ ಸಿಕ್ಕಿದೆ. ಇದೇ 28ರಂದು ಬೆಂಗಳೂರಿನಲ್ಲಿ ಅನುಶ್ರೀ ಅವರು ಮದುವೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಹೌದು, ಖ್ಯಾತ ನಿರೂಪಕಿ ಅನುಶ್ರೀಯವರು ಆಗಸ್ಟ್ 28ರಂದು ಹಸಿಮಣೆ ಏರಲಿದ್ದಾರೆ ಎಂದು ತಿಳಿದುಬಂದಿದೆ. ಕೊಡಗು ಮೂಲದ ರೋಷನ್ ಜೊತೆ ಆ. 28 ರಂದು ಬೆಂಗಳೂರಿನ ಹೊರವಲಯದ ರೆಸಾರ್ಟ್ನಲ್ಲಿ ಸಪ್ತಪದಿ ತುಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಿದ ಸುದೀಪ್!
ರೋಷನ್ ರಾಮಮೂರ್ತಿ ಅವರ ಪುತ್ರನಾಗಿದ್ದು, ಬೆಳಗ್ಗೆ 10:56 ಶುಭ ಮುಹೂರ್ತದಲ್ಲಿ ಅನುಶ್ರಿ ರೋಷನ್ ಮದುವೆ ನಡೆಯಲಿದೆ. `ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಈಗ ಉತ್ತರ. ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿ ಆಗುವ ಹೊಸ ಮನ್ವಂತರ’ ಎಂದು ಅನುಶ್ರೀ ಆಮಂತ್ರಣ ಪತ್ರಿಕೆಯಲ್ಲಿ ಬರೆಯಿಸಿದ್ದಾರೆ ಎಂದು ತಿಳಿದು ಬಂದಿದೆ.
