ಬೆಂಗಳೂರು: ಇಂದು ಬೆಳ್ಳಂ ಬೆಳಗ್ಗೆ ಇಡಿ ಅಧಿಕಾರಿಗಳು ಸುಮಾರು 16 ಕಡೆಗಳಲ್ಲಿ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಚಳ್ಳಿಕೆರೆ ಪಟ್ಟಣದಲ್ಲಿ ಕಾಂಗ್ರೆಸ್ನ ಶಾಸಕ ಕೆ ಸಿ ವೀರೇಂದ್ರ ನಿವಾಸದ ಮೇಲೆ ಇಡಿ ದಾಳಿ ನಡೆಸುತ್ತಿರುವ ಬೆನ್ನಲ್ಲೇ ಮತ್ತೆ ಇದೀಗ ಬೆಂಗಳೂರಿನಲ್ಲಿ ಇಂದು (ಶುಕ್ರವಾರ ಆ. 22) ಕಾಂಗ್ರೆಸ್ ನ ನಾಯಕಿ ಕುಸುಮಾ ನಿವಾಸದ ಮೇಲೂ ಕೂಡ ಇಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ..
ಇನ್ನು ಕುಸುಮಾ ಅವರು ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಅವರೊಂದಿಗೆ ಆರ್ಥಿಕ ವ್ಯವಹಾರ ಹೊಂದಿದ್ದರೂ ಎಂಬ ಹಿನ್ನೆಲೆಯಲ್ಲಿ ಬೆಂಗಳೂರಿನ ರಾಜರಾಜೇಶ್ವರಿನಗರದ ಕುಸುಮಾ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಕಾಂಗ್ರೆಸ್ ಶಾಸಕನ ಮನೆ ಮೇಲೆ ಇಡಿ ದಾಳಿ
ಬೆಂಗಳೂರು, ಚಳ್ಳಕೆರೆ, ಚಿತ್ರದುರ್ಗ ಹಾಗೂ ಗೋವಾ ಸೇರಿದಂತೆ 16 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರಿಗೆ ಸೇರಿದ ಚಿತ್ರದುರ್ಗ ಮತ್ತು ಬೆಂಗಳೂರಿನ ಪ್ರೆಸ್ಟೀಜ್ ಎಡ್ವರ್ಡಿಯನ್ ಅಪಾರ್ಟ್ಮೆಂಟ್ ಫ್ಲಾಟ್ ಸೇರಿದಂತೆ 4 ಮನೆಗಳ ಮೇಲೆ ಇಡಿ ತಂಡ ದಾಳಿ ನಡೆಸಿದೆ.
