ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಡೆವಿಲ್ ಸಿನಿಮಾ ಈಗಾಗಲೇ ಬಹುತೇಕ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದು, ಡೆವಿಲ್ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿ ಎಲ್ಲೆ ಸದ್ದು ಮಾಡುತ್ತಿದೆ.
ಹೌದು, ಡೆವಿಲ್ ಸಿನಿಮಾದ ಮೊದಲ ಸಾಂಗ್ ʼಇದ್ರೆ ನೆಮ್ಮದಿಯಾಗಿರಬೇಕುʼ ಎನ್ನುವ ಸಾಂಗ್ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು, ದರ್ಶನ್ ಅಭಿಮಾನಿಗಳು ಡೆವಿಲ್ ಸಿನಿಮಾದ ಸಾಂಗ್ ನೋಡಿ ಖುಷಿಪಟ್ಟಿದ್ದಾರೆ. ಇನ್ನು ಡೆವಿಲ್ ಸಿನಿಮಾದ ಇದ್ರೆ ನೆಮ್ಮದಿಯಾಗಿರಬೇಕು ಎನ್ನುವ ಸಾಂಗ್ ಕೇವಲ 24 ಗಂಟೆ ಒಳಗಾಗಿ ಒಂದು ಕೋಟಿಗೂ ಅಧಿಕ ವೀಕ್ಷಣೆ ಕಂಡಿದೆ. ಇದನ್ನೂ ಓದಿ: ಇದೇ ಆಗಸ್ಟ್ 28ಕ್ಕೆ ಅನುಶ್ರೀ ಮದುವೆ!?
ಇನ್ನು ದಾಸ ಅಭಿಮಾನಿಗಳಿಗೆ ಇಷ್ಟವಾಗುವ ರೀತಿ ಸ್ಟೈಲೀಶ್ ಆಗಿ, ಗ್ಲಾಮರ್ ಲುಕ್ನಲ್ಲಿ ಹೆಜ್ಜೆ ಹಾಕಿದ್ದಾರೆ. ಪ್ರಕಾಶ್ ವೀರ್ ಅವರು ‘ದಿ ಡೆವಿಲ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಅಜನೀಶ್ ಬಿ. ಲೋಕನಾಥ್ ಅವರ ಸಂಗೀತ ಸಂಯೋಜನೆ ಆದ್ದರಿಂದ ಹಾಡುಗಳ ಮೇಲೆ ಜನರಿಗೆ ಇರುವ ನಿರೀಕ್ಷೆ ಅಪಾರ. ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಕೇಳಿ ದರ್ಶನ್ ಅಭಿಮಾನಿಗಳಿಗೆ ಇಷ್ಟ ಆಗಿದೆ. ವಿಶೇಷವಾಗಿ ಈ ಹಾಡಿನಲ್ಲಿ ದರ್ಶನ್ ಅವರ ಗೆಟಪ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.
