ಬೆಂಗಳೂರು: ಈ ಬಾರಿ ದಸರಾ ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತ ಭಾನು ಮುಸ್ತಾಕ್ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಬಾನು ಮುಸ್ತಾಕ್ ಅವರು ದಸರಾವನ್ನು ಉದ್ಘಾಟನೆ ಮಾಡುತ್ತಿರುವುದನ್ನು ಕೆಲ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಇನ್ನು ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಈ ಕುರಿತು ಪ್ರತಿಕ್ರಿಯಿಸಿದ್ದು, ಭಾನು ಮುಷ್ತಾಕ್ ಅವರು ನಮ್ಮ ಹಿಂದೂ ಸಂಸ್ಕೃತಿ, ಪರಂಪರೆ, ಆಚಾರ ವಿಚಾರಗಳನ್ನು ಒಪ್ಪಿ, ಅದರ ಬಗ್ಗೆ ನಂಬಿಕೆ ಇಟ್ಟು ಬರುವುದಾದರೆ ನಾವು ಸ್ವಾಗತಿಸುತ್ತೇವೆ ಎಂದು ವಿಜಯೇಂದ್ರ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಬಾನು ಮುಷ್ತಾಕ್ ಬದಲಾವಣೆ ಬಗ್ಗೆ ಮರು ಚಿಂತನೆ ಯಾವುದು ಇಲ್ಲ: ಹೆಚ್ ಸಿ ಮಹದೇವಪ್ಪ
ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭಾನು ಮುಷ್ತಾಕ್ ಮತ್ತು ಕೊಡಗಿನ ದೀಪಾ ಭಸ್ತಿ ಅವರು ಸೇರಿ ಇಬ್ಬರಿಗೆ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಬಂದಿದೆ. ರಾಜ್ಯ ಸರಕಾರವು ದಸರಾ ಉತ್ಸವಕ್ಕೆ ಭಾನು ಮುಷ್ತಾಕ್ ಜೊತೆಗೇ ಕೊಡಗಿನ ದೀಪಾ ಭಸ್ತಿ ಅವರನ್ನು ಕರೆಯಬಹುದಾಗಿತ್ತು. ಅವರನ್ನು ಕರೆಯಬೇಕೆಂದು ಸಿದ್ದರಾಮಯ್ಯನವರಿಗೆ ಯಾಕೆ ಅನಿಸಿಲ್ಲ? ಎಂದು ಕೇಳಿದರು.
