ಬೆಂಗಳೂರು: ರಾಜ್ಯದಾದ್ಯಂತ ಗಣೇಶ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲು ಎಲ್ಲೆಡೆ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಳೆ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ತಿಳಿದುಬಂದಿದೆ.
ಹೌದು, ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಾಳೆ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ಬಿಬಿಎಂಪಿ ನಿಷೇಧಿಸಿದೆ.
ಬಿಬಿಎಂಪಿಯ ಪಶುಸಂಗೋಪನಾ ಇಲಾಖೆಯು, ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳು ಎರಡೂ ಮುಚ್ಚಲ್ಪಟ್ಟಿರಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಶಿವರಾಜ್ಕುಮಾರ್ ಬಳಿ ಕ್ಷಮೆ ಕೇಳಿದ ಮಡೆನೂರು ಮನು
ಗಣೇಶ ಚತುರ್ಥಿ ಆಚರಣೆಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಈಗಾಗಲೇ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಪ್ಲಾಸ್ಟರ್ ಆಫ್ ಪ್ಯಾರೀಸ್ ಮೂರ್ತಿ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಇತ್ತ ಬಿಬಿಎಂಪಿ ಕೂಡ ಪರಿಸರಸ್ನೇಹಿ ಗಣಪನ ಮೂರ್ತಿ ಖರೀದಿಸಿ ಹಬ್ಬ ಆಚರಿಸುವಂತೆ ಕರೆ ನೀಡಿದ್ದು, ಆ ನಿಟ್ಟಿನಲ್ಲಿ ನಟ-ನಟಿಯರ ಮೂಲಕ ಜಾಗೃತಿಯನ್ನೂ ಮೂಡಿಸುತ್ತಿದೆ.
