ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬವನ್ನು ಕೇವಲ ರಾಜ ಮಾತ್ರವಲ್ಲದೆ, ದೇಶ ಮಾತ್ರವಲ್ಲದೆ, ಬೇರೆ ದೇಶದವರು ಬಂದು ನಮ್ಮ ಕರ್ನಾಟಕದ ಹೆಮ್ಮೆಯ ದಸರಾ ಹಬ್ಬವನ್ನು ಕಣ್ಣು ತುಂಬಿಕೊಳ್ಳುತ್ತಾರೆ. ಅಂತಹ ದಸರಾ ಹಬ್ಬ ಕೇವಲ ಹಿಂದೂ ಧರ್ಮದವರಿಗೆ ಮಾತ್ರ ಮೀಸಲಾಲ್ಲ. ನಾಡ ದೇವತೆ ತಾಯಿ ಚಾಮುಂಡಿ ಎಲ್ಲರ ಸ್ವತ್ತು. ಚಾಮುಂಡಿ ತಾಯಿ ನಮ್ಮರಾಜ್ಯದ ಸಂಪತ್ತು ಎಂದು ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಒಂದನ್ನು ಹಾಕಿರುವ ಅವರು, ಚಾಮುಂಡೇಶ್ವರಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು. ತಾಯಿ ಎಲ್ಲ ಭಕ್ತರ, ನಾಡಿನ ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ ಯಾರೂ ಬೇಡ ಅನ್ನಲು ಆಗುವುದಿಲ್ಲ. ಇದೇ ನನ್ನ ಮಾತಿನ ಸತ್ವ. ವಿವಾದ ಮಾಡೋದು ಬಿಜೆಪಿ ತತ್ವ! ಇದನ್ನೂ ಓದಿ: ಅಶ್ವಥ್ ನಾರಾಯಣ ರೆಡ್ಡಿಯವರಿಗೆ ಗೌರವ ನಮನ ಸಲ್ಲಿಸಿದ ಅರವಿಂದ್ ಲಿಂಬಾವಳಿ
ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮ, ಸಮಾಜದವರಿಗೂ ಪ್ರವೇಶವಿದೆ. ಎಲ್ಲರೂ ಬೆಟ್ಟಕ್ಕೆ ಹೋಗುತ್ತಾರೆ. ದೇವಿಯ ಪ್ರಾರ್ಥನೆ ಮಾಡುತ್ತಾರೆ. ಎಲ್ಲರ ನೋವನ್ನು ದೂರ ಮಾಡುವಳು ನಮ್ಮ ದುರ್ಗಾ ದೇವಿ.
ನಾಡ ಹಬ್ಬ ದಸರಾವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳಿಂದ ಜನ ಬರುತ್ತಾರೆ. ಇದಕ್ಕೆ ನಮ್ಮ ರಾಜ ವಂಶಸ್ಥರೇ ಅನುಮತಿ ನೀಡಿ ಸಾಕ್ಷಿಯಾಗಿದ್ದಾರೆ. ನಾಡ ಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು. ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ, ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ! ಎಂದಿದ್ದಾರೆ.
