ಮೈಸೂರು: ಈ ಬಾರಿ ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರವು ಬೂಕರ್ ಪ್ರಶಸ್ತಿಯ ವಿಜೇತ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿದೆ. ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ಆಹ್ವಾನ ನೀಡಿರುವುದನ್ನು ಬಿಜೆಪಿ ಕೆಲ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಇನ್ನು ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಈ ಕುರಿತು ಪ್ರತಿಕ್ರಿಯಿಸಿದ್ದು, ನೀವು ನಂಬಿರುವ ಅಲ್ಲಾನೇ ನಿಮ್ಮನ್ನು ಮಸೀದಿಗೆ ಕರೆಸಿಕೊಳ್ಳಲಿಲ್ಲ. ಹಾಗಾದ್ರೆ ನಮ್ಮ ದೇವರು ಹೇಗೆ ನಿಮ್ಮನ್ನು ಕರೆಸಿಕೊಳ್ಳುತ್ತಾರೆ ಎಂದು ಭಾನು ಮುಷ್ತಾಕ್ ಅವರಿಗೆ ಪ್ರಶ್ನಿಸಿದ್ದಾರೆ.
ನಿವು ಮುಸ್ಲಿಂ ಅನ್ನುವ ಕಾರಣಕ್ಕೆ ನಾನು ವಿರೋಧಿಸುತ್ತಿಲ್ಲ. ಟಿಪ್ಪು ಜಯಂತಿ ಮಾಡಿ ಎಂದು ಮುಸ್ಲಿಮರು ಕೇಳಿರಲಿಲ್ಲ. ಸಿದ್ದರಾಮಯ್ಯ ಮುಸ್ಲಿಮರ ಓಲೈಕೆಗಾಗಿ ಟಿಪ್ಪು ಜಯಂತಿ ಮಾಡಿದರು. ಬಾನು ಮುಷ್ತಾಕ್ರನ್ನು ದಸರಾ ಉದ್ಘಾಟನೆಗೆ ಕರೆಯಿರಿ ಎಂದು ಯಾವ ಮುಸ್ಲಿಮರು ಕೇಳಿರಲಿಲ್ಲ. ಅದರೂ ಸಿದ್ದರಾಮಯ್ಯ ಮಾಡಿದರು. ಬಾನು ಮುಷ್ತಾಕ್ ಅವರಿಗೆ ನೇರವಾಗಿ ಪ್ರಶ್ನೆ ಕೇಳ್ತೀನಿ. ಜನ ಸಾಹಿತ್ಯ ಭಾಷಣದಲ್ಲಿ ನಿಮ್ಮ ಭಾಷಣ ಏನಿತ್ತು? ಮುಸ್ಲಿಮರು ಕನ್ನಡ ಕಲಿಯಲು ಭುವನೇಶ್ವರಿ ತಾಯಿ ಮೂರ್ತಿ ಅಡ್ಡಿಯಾಯಿತು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ನಾಡ ಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು: ಡಿಕೆಶಿ
ಭುವನೇಶ್ವರಿಗೆ ಅರಿಶಿನ, ಕುಂಕುಮ ಇಟ್ಟಿದ್ದರಿಂದ ಮುಸ್ಲಿಮರು ಕನ್ನಡ ಕಲಿಯಲು ಆಗಿಲ್ಲ ಎಂದು ಮುಷ್ತಾಕ್ ಹೇಳಿದ್ದು ಸತ್ಯ ತಾನೆ? ಕನ್ನಡವನ್ನು ಭುವನೇಶ್ವರಿ ಆಗಿ ಒಪ್ಪದ ಬಾನು ಮುಷ್ತಾಕ್, ನಾಡದೇವಿ ರೂಪದಲ್ಲಿನ ಚಾಮುಂಡಿಯನ್ನು ಒಪ್ಪುತ್ತಾರಾ? ಅರಿಶಿನ, ಕುಂಕುಮ ಬಗ್ಗೆ ಯಾಕೆ ಬಾನು ಮುಷ್ತಾಕ್ಗೆ ತಕರಾರು, ಕಿರಿಕಿರಿ ಇದೆ? ಹಿಂದೂಗಳ ಮನೆಯಲ್ಲಿ ಯಾರೇ ಸುಮಂಗಲಿ ಹೋದರೂ ಕುಂಕುಮ ಕೊಡುತ್ತಾರೆ. ದೇವಸ್ಥಾನಕ್ಕೆ ಹೋದರೆ ಕುಂಕುಮ ಪ್ರಸಾದವಾಗಿ ಕೊಡುತ್ತಾರೆ. ಇಂತಹ ಕುಂಕುಮವೇ ಬಾನು ಮುಷ್ತಾಕ್ಗೆ ಕಿರಿಕಿರಿ ಉಂಟು ಮಾಡಿದೆ. ಅರಿಶಿನ ಕುಂಕುಮ ಬಗ್ಗೆ ಅವರಿಗೆ ದ್ವೇಷದ ಭಾವನೆ ಇದೆ ಎಂದು ಟಾಂಗ್ ಕೊಟ್ಟರು.
