ಬೆಂಗಳೂರು: ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆರ್ ಎಸ್ ಎಸ್ ನ ಗೀತೆ ಹಾಡಿದ್ದಕ್ಕೆ ಸ್ವಪಕ್ಷ ಹಾಗೂ ಕೆಲ ಹಿರಿಯ ನಾಯಕರು ಆಕ್ರೋಶ ಹೊರಹಾಕುತ್ತಿರುವ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಕ್ಷಮೆ ಕೇಳಿದ್ದಾರೆ. ಡಿಕೆ ಶಿವಕುಮಾರ್ ಅವರು ಕ್ಷಮೆ ಕೇಳಿದ್ದನ್ನೇ ಜೆಡಿಎಸ್ ಹಾಗೂ ಬಿಜೆಪಿ ಲೇಬಡಿ ಮಾಡಿದೆ.
ನಾನು ಏನೇ ಮಾತನಾಡಿದರು ಕೂಡ ಅದನ್ನು ವಿರೋಧ ಪಕ್ಷದವರು ಅಥವಾ ಕೆಲ ನಾಯಕರು ತಪ್ಪು ಕಂಡುಹಿಡಿಯುತ್ತಿದ್ದಾರೆ ಹಾಗಾಗಿ ನಾನು ಮಾತನಾಡದಿರುವುದೇ ಉತ್ತಮ ಎಂದು ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ಇದನ್ನೂ ಓದಿ: ದೇವರಿಗೆ ಧರ್ಮವಿಲ್ಲ, ಪ್ರಾರ್ಥನೆ ಯಾರೊಬ್ಬರ ಸ್ವತ್ತಲ್ಲ: ಡಿಸಿಎಂ ಡಿಕೆಶಿ
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸತ್ಯ ಹೇಳಿದರೆ ಕೆಲವರು ಸಹಿಸುವುದಿಲ್ಲ ಹಾಗಾಗಿ ನಾನು ಮಾತನಾಡದಿರುವುದೇ ಲೇಸು ಎಂದಿದ್ದಾರೆ. ನಾನು ಎಲ್ಲಿ ಏನೇ ಮಾತನಾಡಿದರೂ ಅದರಲ್ಲಿ ಕೇವಲ ತಪ್ಪು ಕಂಡು ಹಿಡಿಯುವುದೇ ಬೇರೆಯವರ ಕೆಲಸವಾಗಿದೆ. ರಾಜಕೀಯದವರು, ಪ್ರಮೋದಾ ದೇವಿ ಅವರು, ಸಂಸದ ಯದುವೀರ್ ಅವರು, ವಿಧಾನಸಭೆಯಲ್ಲಿ ಹೀಗೆ ಎಲ್ಲರೂ ತಪ್ಪು ಹುಡುಕುವವರೇ. ಹೀಗಾಗಿ ನಾನು ಮಾತನಾಡದಿರುವುದೇ ಲೇಸು ಅನಿಸುತ್ತದೆ. ಈ ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಲು ಬೇರೆ ನಾಯಕರು ಹಾಗೂ ಪಕ್ಷದ ವಕ್ತಾರರಿದ್ದಾರೆ. ಅವರ ಬಳಿ ಮಾತನಾಡಿ ಎಂದು ಹೇಳಿದರು.
