ಬೆಂಗಳೂರು: ಹಲವಾರು ಕನ್ನಡ ಚಿತ್ರಗಳಲ್ಲಿ ಖಳನಾಯಕನಾಗಿ ನಟಿಸಿದ್ದ ಹರೀಶ್ ರಾಯ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ.
ಹೌದು, ಕೆಜಿಎಫ್ ಸಿನಿಮಾದಲ್ಲಿ ಚಾಚಾ ಎಂದೇ ಫೇಮಸ್ ಆಗಿದ್ದ ಹರೀಶ್ ಅವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅಲ್ಲದೆ ತಮ್ಮ ಚಿಕಿತ್ಸೆಗೆಂದು ಸಹಾಯ ಕೋರಿದ್ದಾರೆ.
ಹರೀಶ್ ರಾಯ್ ಅವರಿಗೆ ಕ್ಯಾನ್ಸರ್ ಕಾಣಿಸಿಕೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಅವರು ಸಹಾಯಕ್ಕಾಗಿ ಅಂಗಲಾಚಿ ವಿಡಿಯೋ ಮಾಡಿದ್ದು, ಅದನ್ನು ಇನ್ಸ್ಟಾದಲ್ಲಿ ಅಪ್ಲೋಡ್ ಮಾಡಲಾಗಿದೆ. ಇದನ್ನೂ ಓದಿ: ನಾನು ಸತ್ಯ ಹೇಳಿದರೆ ಕೆಲವರು ಸಹಿಸಲ್ಲ: ಡಿಸಿಎಂ
ಹರೀಶ್ ರಾಯ್ ಅವರಿಗೆ ಥೈರಾಯ್ಡ್ ಕ್ಯಾನ್ಸರ್ ಕಾಣಿಸಿಕೊಂಡಿದೆ. ಅದು ಈಗ ಹೊಟ್ಟೆಗೂ ಪಸಿರಿಸಿದ್ದು, ಹೊಟ್ಟೆ ಊದಿಕೊಂಡಿದೆ. ಕೆಜಿಎಫ್ ಚಾಚಾನ ಸ್ಥಿತಿ ನೋಡಿ ಅನೇಕರು ಕಣ್ಣೀರು ಹಾಕಿದ್ದು, ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ. ಗೋಪಿ ಗೌಡ ಹೆಸರಿನ ವ್ಯಕ್ತಿ ಈ ಬಗ್ಗೆ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
