ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ಇಂದು ಹಲವು ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ ಕಾಣಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಹೌದು, ಬೆಂಗಳೂರು ನಗರದ ಹಲವೆಡೆ (ಶುಕ್ರವಾರ ಆ. 29) ಇಂದು ತುರ್ತು ವಿದ್ಯುತ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ 66/11 ಕೆ.ವಿ. ಮಹಾಲಕ್ಷ್ಮೀ ಲೇಔಟ್ ಉಪಕೇಂದ್ರ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೃಷಿ ಕೆಲಸ ಮಾಡುತ್ತಿರುವ ಪ್ರಜ್ವಲ್ ರೇವಣ್ಣ!
ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್ ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್, ಬಿ-ನಗರ, ಲಕ್ಷ್ಮೀ ನಗರ, ಎಚ್.ವಿ.ಕೆ.ಲೇಔಟ್, ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋಡಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ ಸೇರಿದಂತೆ ಇನ್ನೂ ಹಲವೆಡೆ ವಿದ್ಯುತ್ ತೊಂದರೆಯಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಬೆಸ್ಕಾಂ ಮನವಿ ಮಾಡಿದೆ.
