ಬೆಂಗಳೂರು: ಆನ್ಲೈನ್, ಆಫ್ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇನ್ನು ಇಡಿ ಅಧಿಕಾರಿಗಳು ನನಗೆ ಕಿರುಕುಳ ನೀಡುತ್ತಿದ್ದಾರೆ. ನಾನೇನಾದರೂ ಸತ್ತರೆ ಅದಕ್ಕೆ ಸಂಪೂರ್ಣ ಹೊಣೆ ಇಡಿ ಅಧಿಕಾರಿಗಳೇ ಎಂದು ಶಾಸಕ ಕೆ ಸಿ ರವೀಂದ್ರ ಅವರು ಇಡಿ ಅಧಿಕಾರಿಗಳ ವಿರುದ್ಧ ಆರೋಪಿಸಿದ್ದಾರೆ.
ಕಸ್ಟಡಿಯಲ್ಲಿ ಇ.ಡಿ ಅಧಿಕಾರಿಗಳು ನನ್ನನ್ನು ಸರಿಯಾಗಿ ನಡೆಸಿಕೊಂಡಿಲ್ಲ, ಕಿರುಕುಳ ನೀಡಿದ್ದಾರೆ. ಕುಡಿಯಲು ಅಶುದ್ಧ ನೀರನ್ನು ನೀಡಿದ್ದಾರೆ. ಪ್ಲಾಸ್ಟಿಕ್ ಕಂಟೇನರ್ನಲ್ಲಿ ಊಟ ಒದಗಿಸಿದ್ದಾರೆ. ಕೂರಲು ಕುರ್ಚಿಯನ್ನೂ ನೀಡಿಲ್ಲ. ಸರಿಯಾದ ಕೋಣೆಯಲ್ಲಿ ಇರಿಸಿಲ್ಲ, ನಾನು ಸತ್ತರೆ, ಅದಕ್ಕೆ ಇ.ಡಿ ಅಧಿಕಾರಿಗಳೇ ಹೊಣೆ ಎಂದಿದ್ದಾರೆ.
ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಮುಂದೆ ಕೆ.ಸಿ.ವೀರೇಂದ್ರ ಅವರು ಇ.ಡಿ ಕಸ್ಟಡಿ ತಮಗೆ ನೀಡುತ್ತಿರುವ ಕಿರುಕುಳ ಬಗ್ಗೆ ಹೇಳಿಕೊಂಡಿದ್ದಾರೆ. ವೀರೇಂದ್ರ ಪರ ಹಾಜರಾಗಿದ್ದ ಹಿರಿಯ ವಕೀಲರಾದ ಕಿರಣ್ ಜವಳಿ ಹಾಗೂ ಎಚ್.ಎಸ್.ಚಂದ್ರಮೌಳಿ, ‘ಕೆ.ಸಿ.ವೀರೇಂದ್ರ ಬಂಧನದ ವೇಳೆ ಇ.ಡಿ ಅಧಿಕಾರಿಗಳು ಸೂಕ್ತ ನ್ಯಾಯಿಕ ಪ್ರಕ್ರಿಯೆ ಪಾಲನೆ ಮಾಡಿಲ್ಲ. ಯಾವ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂಬ ಮಾಹಿತಿ ನೀಡಿಲ್ಲ, ಅಧಿಕಾರಿಗಳು ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ’ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೃಷಿ ಕೆಲಸ ಮಾಡುತ್ತಿರುವ ಪ್ರಜ್ವಲ್ ರೇವಣ್ಣ!
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ‘ಯಾವ ಪ್ರಕರಣದಲ್ಲಿ ಇಸಿಐಆರ್ ದಾಖಲಿಸಿದ್ದೀರಿ’ ಎಂದು ಇ.ಡಿ ಅಧಿಕಾರಿಗಳನ್ನು ಪ್ರಶ್ನಿಸಿದರು. ಆರೋಪಿಗೆ ಸೂಕ್ತ ಕಾರಣ ನೀಡದೆ ಬಂಧಿಸಬಾರದು. ಕೋರ್ಟ್ಗೆ ಬಂದ ಮೇಲೆ ಯಾವುದೋ ಪ್ರಕರಣಗಳನ್ನು ಸೇರಿಸಬಾರದು, ನಿಮ್ಮದು ಯಾವ ರೀತಿಯ ತನಿಖೆ ಎಂದು ಇ.ಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
