ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮದಿ ಮಾಡಿರುವುದರ ಕುರಿತಾಗಿ ವಿಷ್ಣುವರ್ಧನ್ ಅಭಿಮಾನಿಗಳು ಆಕ್ರೋಶ ಅವರ ಹಾಕುತ್ತಿದ್ದಾರೆ.
ಹೌದು, ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ರವರ ಸಮಾದಿಯನ್ನು ನೆಲಸಮನ ಮಾಡಿರುವುದರಿಂದ ವಿಷ್ಣುವರ್ಧನ್ ಅಭಿಮಾನಿಗಳು ಆಕ್ರೋಶ ಹೊರಹಾಕುತ್ತಿರುವ ಬೆನ್ನೆಲೆ ಇದೀಗ ನಿಯಮ ಉಲ್ಲಂಘನೆಯಾಗಿ ವಿಷ್ಣುವರ್ಧನ್ ಅವರ ಸಮಾಧಿಯನ್ನು ನೆಲಸಮ ಮಾಡಲಾಗಿದೆ ಹಾಗಾಗಿ ಆ ಜಾಗವನ್ನು ವಶಕ್ಕೆ ಹೊಡೆದುಕೊಳ್ಳಿ ಎಂದು ಡಿಸಿಗೆ ಅರಣ್ಯಾಧಿಕಾರಿಗಳು ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗ ತಮಿಳು ನಟ ವಿಶಾಲ್!
ಆಗಸ್ಟ್ 22ರಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಅವರು ಈ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಅವರು ನಿಯಮ ಉಲ್ಲಂಘನೆ ಬಗ್ಗೆ ಉಲ್ಲೇಖಿಸಿದ್ದಾರೆ. ಈ ವಿಚಾರದಲ್ಲಿ ಜಿಲ್ಲಾಧಿಕಾರಿ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
