Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೆಂಪೇಗೌಡರ ಋಣ ತೀರಿಸಲು ಮಾಗಡಿ ಅಭಿವೃದ್ಧಿಗೆ ನಾವು ಬದ್ಧ: ಡಿಕೆಶಿ
  • Bangalore
  • Front news
  • Politics
  • State

ಕೆಂಪೇಗೌಡರ ಋಣ ತೀರಿಸಲು ಮಾಗಡಿ ಅಭಿವೃದ್ಧಿಗೆ ನಾವು ಬದ್ಧ: ಡಿಕೆಶಿ

admin August 29, 2025 1 minute read
WhatsApp Image 2025-08-29 at 15.57.09
Spread the love

ಮಾಗಡಿ: ಮಾಗಡಿಯಲ್ಲಿ ಕೆಂಪೇಗೌಡರು ನಿರ್ಮಿಸಿದ ಐತಿಹಾಸಿಕ ಕೋಟೆ, ಸೋಮೇಶ್ವರ ದೇವಾಲಯ, ಕೆಂಪಾಪುರದಲ್ಲಿರುವ ಕೆಂಪೇಗೌಡರ ಸಮಾಧಿಯನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದರು.

ಮಾಗಡಿ ಪಟ್ಟಣದಲ್ಲಿ ಇಂದು (ಶುಕ್ರವಾರ ಆ. 29) ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ಕಟ್ಟಿರುವ ಐತಿಹಾಸಿಕ ಮಾಗಡಿ ಕೋಟೆಯ ಹಳೆಯ ವೈಭವವನ್ನು ಹಿಂದಿರುಗಿಸಲು ಮತ್ತು ಸಂರಕ್ಷಿಸಲು ಕೋಟೆಯ ಪುನರುಜ್ಜೀವನ ಕಾರ್ಯಕ್ಕಾಗಿ 103 ಕೋಟಿ ರೂ. ಅನುದಾನವನ್ನು ಬೆಂಗಳೂರು ನಗರದಿಂದ ನೀಡಿದ್ದೇನೆ. ಬೆಂಗಳೂರಿನ ಸುಮನಹಳ್ಳಿಯಲ್ಲಿ 5 ಎಕರೆ ಜಾಗದಲ್ಲಿ ಕೆಂಪೇಗೌಡ ಭವನ ನಿರ್ಮಿಸುವ ಕಾರ್ಯ ನಡೆಯುತ್ತಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಈ ಬಗ್ಗೆ ರೂಪುರೇಷೆ ಸಿದ್ಧಪಡಿಸಿ, ಚರ್ಚಿಸಿದ್ದಾರೆ ಎಂದರು.

ನಮ್ಮ ಸರ್ಕಾರದ ವತಿಯಿಂದ ಆರೋಗ್ಯ ಇಲಾಖೆಯಲ್ಲಿ ದೊಡ್ಡ ಕ್ರಾಂತಿಯಾಗಿದೆ. ಮಾಗಡಿಯಲ್ಲಿ ಅತ್ಯಾಧುನಿಕ ಆಸ್ಪತ್ರೆ ನಿರ್ಮಾಣ ಮಾಡಬೇಕು ಎನ್ನುವುದು ಹಲವು ದಿನಗಳ ಬೇಡಿಕೆಯಾಗಿತ್ತು. 41 ಕೋಟಿ ರೂ. ವೆಚ್ಚದಲ್ಲಿ, 2 ಎಕರೆ ಜಾಗದಲ್ಲಿ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಿಸುತ್ತಿದ್ದೇವೆ. ಸಾರಿಗೆ ಸಚಿವರಾಗಿರುವ ರಾಮಲಿಂಗಾರೆಡ್ಡಿ ಅವರು, ಬಸ್‌ ನಿಲ್ದಾಣ ಹಾಗೂ ಡಿಪೋ ನಿರ್ಮಾಣ ಮಾಡಿಕೊಡುವುದಾಗಿ ವಾಗ್ದಾನ ಮಾಡಿದ್ದಾರೆ. ಇದನ್ನೂ ಓದಿ: ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು ಹಾಕಲು ಡಿಸಿಗೆ ಅರಣ್ಯಾಧಿಕಾರಿ ಪತ್ರ

20 ಕೋಟಿ ರೂ. ವೆಚ್ಚದಲ್ಲಿ ಮಾಗಡಿಯ ಗೌರಮ್ಮನ ಕೆರೆ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ. 159 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿದ್ದೇವೆ. 1200 ಜನರಿಗೆ ‘ಇ -ಸ್ವತ್ತು’ ವಿತರಿಸಲಾಗಿದೆ. ಇನ್ನುಳಿದವರಿಗೆ ಶೀಘ್ರದಲ್ಲಿ ವಿತರಿಸಲು ಸಿದ್ಧತೆ ನಡೆಸಲಾಗಿದೆ. 13 ಕೋಟಿ ವೆಚ್ಚದಲ್ಲಿ ಮಂಚನಬೆಲೆ ಬಳಿ ಹಲವು ಅಭಿವೃದ್ಧಿ ಕೆಲಸಗಳನ್ನು ಆರಂಭಿಸುತ್ತಿದ್ದು, 90 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಮಾಗಡಿಯ ಕೆರೆಗಳಿಗೆ ನೀರು ತುಂಬಿಸುವ ಮಹತ್ವದ ಯೋಜನೆಯನ್ನು ಕೈಗೆತ್ತಿಕೊಂಡಿದ್ದೇವೆ ಎಂದರು.

ನಾನು ಇಂಧನ ಸಚಿವನಾಗಿದ್ದ ಸಂದರ್ಭದಲ್ಲಿ ಹೆಚ್‌ವಿಡಿಎಸ್‌ ಯೋಜನೆಯಡಿ ರೈತರಿಗೆ ವಿದ್ಯುತ್‌ ಪರಿವರ್ತಕಗಳನ್ನು ನೀಡಿರುವುದು ಒಂದು ದಾಖಲೆಯಾಗಿ ಉಳಿದಿದೆ. ರೈತರಿಗೆ ಟ್ರಾನ್ಸ್‌ಫಾರ್ಮರ್‌ ಒದಗಿಸುವ ಯೋಜನೆ ದೇಶದಲ್ಲಿ ಯಾವುದೇ ಲೋಕಸಭಾ ಕ್ಷೇತ್ರದಲ್ಲಿಯೂ ಮಾಡಲಾಗದ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಾವು ಮಾಡಿದ್ದೇವೆ ಎಂದು ಸಂತೋಷವಾಗುತ್ತದೆ. ಮಾಗಡಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾವು ಸದಾ ಬದ್ಧರಾಗಿರುತ್ತೇವೆ ಎಂದರು.

About the Author

admin

Administrator

Visit Website View All Posts

Spread the love

Post navigation

Previous: ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು ಹಾಕಲು ಡಿಸಿಗೆ ಅರಣ್ಯಾಧಿಕಾರಿ ಪತ್ರ
Next: ರಾಹುಲ್ ಗಾಂಧಿ ಯಾತ್ರೆಯಲ್ಲಿ ಸಿಎಂ ಭಾಗಿ

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.