ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತಹ ಎಂ ಸತೀಶ್ ರೆಡ್ಡಿ ಅವರು ಇಂದು (ಶನಿವಾರ ಆಗಸ್ಟ್ 30) ರಂದು BTM 4ನೇ ಹಂತದ RMR ಉದ್ಯಾನವನದಲ್ಲಿ ನವೀಕರಿಸಿದ ವುಡನ್ ಬ್ಯಾಡ್ಮಿಂಟನ್ ಕೋರ್ಟ್ ಹಾಗೂ ಆಧುನಿಕ ಜಿಮ್ ಉಪಕರಣಗಳನ್ನು ಸಾರ್ವಜನಿಕರ ಬಳಕೆಗೆ ಉದ್ಘಾಟಿಸಿದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಸೌಲಭ್ಯಗಳು ಪ್ರತಿಯೊಬ್ಬರಲ್ಲಿಯೂ ಕ್ರೀಡೆಗೆ ಆಸಕ್ತಿ ಬೆಳೆಸುವುದರ ಜೊತೆಗೆ ಆರೋಗ್ಯಕರ ಜೀವನ ಶೈಲಿಯನ್ನು ಉತ್ತೇಜಿಸುತ್ತದೆ. ಮಕ್ಕಳಿಂದ ಹಿಡಿದು ಹಿರಿಯರ ತನಕ ಎಲ್ಲರೂ ಇದರ ಸದುಪಯೋಗ ಪಡೆಯುವಂತೆ ಹೇಳಿದರು. ಇದನ್ನೂ ಓದಿ: ಜಪಾನ್ ಪ್ರಧಾನಿ ಜೊತೆ ಭಾರತದ ಪ್ರಧಾನಿ ಸವಾರಿ
ಈ ಸಂದರ್ಭದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಮೋಹನ್ ರಾಜು, ಸ್ಥಳೀಯ ಮುಖಂಡರು, ನಿವಾಸಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
