ಬೆಂಗಳೂರು: ಸರ್ಕಾರಿ ಕೆಲಸಗಳಿಗೆ ಇನ್ಮುಂದೆ ಹೆಲಿಕ್ಯಾಪ್ಟರ್ ಅಥವಾ ವಿಮಾನ ಸೇವೆ ಪಡೆಯಲು ವಾರ್ಷಿಕ ಗುತ್ತಿಗೆ ಆಧಾರದ ಮೇಲೆ ಪಡೆಯಬಹುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಈ ಕುರಿತು ಇಂದು (ಸೋಮಾವಾರ ಸೆ. 01) ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಹೌದು, ಇನ್ಮುಂದೆ ಸರ್ಕಾರಿ ಕೆಲಸಗಳಿಗೆ ಹೆಲಿಕಾಪ್ಟರ್, ವಿಮಾನ ಸೇವೆಯನ್ನು ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಪಡೆಯಲು ಸರ್ಕಾರ ನಿರ್ಧಾರ ಮಾಡಿದೆ. ಸಭೆಯಲ್ಲಿ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಸೇವೆ ಪಡೆಯಲು ನಿರ್ಧಾರ ಮಾಡಲಾಗಿದೆ. ಇಷ್ಟು ದಿನ ಗಂಟೆಗಳ ಅವಧಿಯಲ್ಲಿ ಹೆಲಿಕಾಪ್ಟರ್/ವಿಶೇಷ ವಿಮಾನ ಗುತ್ತಿಗೆ ಪಡೆಯಲಾಗುತ್ತಿತ್ತು. ಇನ್ನು ಮುಂದೆ ಗಂಟೆಗಳ ಆಧಾರದಲ್ಲಿ ಬಾಡಿಗೆ ಪಡೆಯದೇ ಇರಲು ನಿರ್ಧಾರ ಮಾಡಲಾಗಿದೆ. ಗಂಟೆಗಳ ಬದಲಾಗಿ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್, ವಿಮಾನ ಸೇವೆ ಪಡೆಯಲು ನಿರ್ಧಾರ ಮಾಡಲಾಗಿದೆ. ವಾರ್ಷಿಕ ಗುತ್ತಿಗೆಗೆ ಸೂಕ್ತ ತರಬೇತಿ ಹೊಂದಿರುವ ಸಂಸ್ಥೆಗಳಿಗೆ ಟೆಂಡರ್ ಆಹ್ವಾನ ಮಾಡಲು ನಿರ್ಧಾರ ಮಾಡಲಾಗಿದೆ. ಆಸಕ್ತಿಯುಳ್ಳ ಸಂಸ್ಥೆಗಳು ಟೆಂಡರ್ನಲ್ಲಿ ಭಾಗಿಯಾಗಿಯಲು ಅವಕಾಶ ನೀಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಇದನ್ನೂ ಓದಿ: ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಸಿಎಂಗೆ ಮನವಿ
